ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹಾಗೂ 2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿರುವ ನಡುವೆಯೇ ಬುಧವಾರ ಲೋಕಸಭೆಯಲ್ಲಿ ಆನ್ಲೈನ್ ಗೇಮಿಂಗ್ ನಿಯಂತ್ರಣ ಮಸೂದೆಯನ್ನು ಮಂಡಿಸಲಾಯಿತು.

ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಮತ್ತು ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಸೂದೆಯನ್ನು ಮಂಡಿಸಿದ್ದಾರೆ.

ಆನ್ಲೈನ್ ಗೇಮಿಂಗ್ ನಿಯಂತ್ರಣ ಮಸೂದೆ ಮಂಡಿಸುವುದಕ್ಕೂ ಮುನ್ನ ಎಸ್ಐಆರ್ ಕುರಿತಾದ ಚರ್ಚೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಆಗ್ರಹಿಸಿದ್ದರು.

ಇದೇ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತನಾಡಿ, ಶಾಲಾ ವಿದ್ಯಾರ್ಥಿಗಳು ಈಗ ಸದನದಲ್ಲಿ ಸಂಸದರ ನಡವಳಿಕೆಗಳ ಬಗ್ಗೆ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿರೋಧ ಪಕ್ಷಗಳಿಂದ ಪ್ರತಿಭಟನೆ ಮುಂದುವರಿದಂತೆ ಸ್ಪೀಕರ್ ಆಸನದಲ್ಲಿದ್ದ ಪಿ.ಸಿ. ಮೋಹನ್ ಅವರು ಕಲಾಪವನ್ನು ಮುಂದೂಡಿದ್ದರು.

ಆನ್ಲೈನ್ ಬೆಟ್ಟಿಂಗ್ ಅನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವುದು, ಹಣ ಆಧಾರಿತ ಎಲ್ಲ ಆನ್ಲೈನ್ ಗೇಮ್ಗಳನ್ನು ನಿಷೇಧಿಸುವುದು, ಆನ್ಲೈನ್ ಗೇಮಿಂಗ್ಗೆ ಸಂಬಂಧಿಸಿದ ಹಣಕಾಸು ವ್ಯವಹಾರ ನಡೆಸಲು ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಅನುಮತಿ ನೀಡದಿರುವುದು ಸೇರಿ ಹಲವು ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.
.Online Gaming Bill 2025: ಇ–ಆಟಕ್ಕೆ ಕಾನೂನು ಅಸ್ತ್ರ; ಜೂಜಾಡಿದರೆ ಕಠಿಣ ಕ್ರಮ.ಆನ್ಲೈನ್ ಗೇಮಿಂಗ್ ವೇದಿಕೆಗಳ ನಿಯಂತ್ರಿಸುವ ಮಸೂದೆಗೆ ಅನುಮೋದನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.