ನವದೆಹಲಿ: ‘ಆನ್ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ’ ಪ್ರಶ್ನಿಸಿ ಮೂರು ಹೈಕೋರ್ಟ್ಗಳಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪುರಸ್ಕರಿಸಿದೆ.

ದೆಹಲಿ, ಕರ್ನಾಟಕ ಮತ್ತು ಮಧ್ಯಪ್ರದೇಶ ಹೈಕೋರ್ಟ್ಗಳ ಮುಂದೆ ಬಾಕಿ ಇರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಸುಪ್ರೀಂ ಕೋರ್ಟ್ಗೆ ವರ್ಗಾಯಿಸಿತು.

ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಮತ್ತು ಇದುವರೆಗೆ ನಡೆದಿರುವ ವಿಚಾರಣೆಯ ಸಂಪೂರ್ಣ ದಾಖಲೆಗಳನ್ನು ಒಂದು ವಾರದೊಳಗೆ ವರ್ಗಾಯಿಸುವಂತೆ ಪೀಠವು ಸಂಬಂಧಪಟ್ಟ ಹೈಕೋರ್ಟ್ಗಳಿಗೆ ನಿರ್ದೇಶಿಸಿತು.

ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲರಾದ ಸಿ.ಎ.ಸುಂದರಂ ಹಾಗೂ ಅರವಿಂದ ದಾತಾರ್ ಅವರ ವಾದ ಅಲಿಸಿದ ಪೀಠ, ‘ಸಮಯವನ್ನು ಉಳಿಸಲಿಕ್ಕಾಗಿ ಈ ವರ್ಗಾವಣೆ ಪ್ರಕ್ರಿಯೆ ಡಿಜಿಟಲ್ ರೂಪದಲ್ಲಿ ನಡೆಯಲಿ’ ಎಂದು ಹೇಳಿತು.

ಹೈಕೋರ್ಟ್ಗಳಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮನವಿ ಮಾಡಿತ್ತು.

ಕಾನೂನಿನಲ್ಲಿರುವ ಅಂಶಗಳ ಕುರಿತು ಒಂದೇ ರೀತಿಯ ಪ್ರಶ್ನೆಗಳನ್ನು ಎತ್ತಿರುವ ಹಲವು ಅರ್ಜಿಗಳು ವಿವಿಧ ಹೈಕೋರ್ಟ್ಗಳ ಮುಂದೆ ಬಾಕಿಯಿರುವುದರಿಂದ, ಅಭಿಪ್ರಾಯಗಳ ಭಿನ್ನತೆ ಅಥವಾ ಬಹುವಿಧದ ವಿಚಾರಣೆಗಳನ್ನು ತಪ್ಪಿಸಲು ಅದನ್ನು ಈ ನ್ಯಾಯಾಲಯ (ಸುಪ್ರೀಂ ಕೋರ್ಟ್) ಅಥವಾ ಯಾವುದಾದರೂ ಹೈಕೋರ್ಟ್ಗೆ ವರ್ಗಾಯಿಸುವುದು ಒಳ್ಳೆಯದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಆನ್ಲೈನ್ ಜೂಜು ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯನ್ನು ಪ್ರಶ್ನಿಸಿ ಹೆಡ್ ಡಿಜಿಟಲ್ ವರ್ಕ್ಸ್ ಪ್ರೈವೆಟ್ ಲಿಮಿಟೆಡ್, ಬಘೀರಾ ಕೇರಮ್ ಪ್ರೈವೆಟ್ ಲಿಮಿಟೆಡ್ ಮತ್ತು ಕ್ಲಬ್ಬೂಮ್ ಇಲೆವೆನ್ ಸ್ಪೋರ್ಟ್ಸ್ ಆ್ಯಂಡ್ ಎಂಟರ್ಟೇನ್ಮೆಂಟ್ ಪ್ರೈವೆಟ್ ಲಿಮಿಟೆಡ್ ಕಂಪನಿಗಳು ಕ್ರಮವಾಗಿ ಕರ್ನಾಟಕ ಹೈಕೋರ್ಟ್, ದೆಹಲಿ ಹೈಕೋರ್ಟ್ ಹಾಗೂ ಮಧ್ಯ ಪ್ರದೇಶ ಹೈಕೋರ್ಟ್ಗಳಿಗೆ ಅರ್ಜಿ ಸಲ್ಲಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.