ಮುಂಬೈ: ಆಜಾದ್ ಮೈದಾನದಲ್ಲಿ ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಿಎಂ ಮತ್ತು ಇಬ್ಬರು ಡಿಸಿಎಂ ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಶಿವಸೇನಾ ನಾಯಕ ಉದಯ್ ಸಾವಂತ್ ಹೇಳಿದ್ದಾರೆ.

ಸಿಎಂ ಆಗಿ ದೇವೇಂಧ್ರ ಫಡಣವೀಸ್, ಡಿಸಿಎಂಗಳಾಗಿ ಅಜಿತ್ ಪವಾರ್ ಮತ್ತು ಏಕನಾಥ ಶಿಂದೆ ಪ್ರಮಾಣವಚನ ಸ್ವೀಕರಿಸುತ್ತಾರೆ. ಸಚಿವ ಸ್ಥಾನಗಳು ಮತ್ತು ಖಾತೆಗಳ ಹಂಚಿಕೆ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಉಪಮುಖ್ಯಮಂತ್ರಿಯಾಗಬೇಕು ಎಂಬುದು ಶಿವಸೇನೆ ಕಾರ್ಯಕರ್ತರು, ಶಾಸಕರು ಮತ್ತು ಸಂಸದರ ಅಪೇಕ್ಷೆಯಾಗಿದೆ ಎಂದು ಸಮಂತ್ ಹೇಳಿದ್ದಾರೆ, ಆದರೆ, ಅವರು ಆ ಸ್ಥಾನವನ್ನು ಅಲಂಕರಿಸಲು ಉತ್ಸುಕರಾಗಿಲ್ಲ ಎಂಬ ಸೂಚನೆಯನ್ನು ನೀಡಿದರು. ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಫಡಣವೀಸ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದು, ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುರುವಾರ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ಡಿಎ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಸಾಧಿಸಲು ರಾಜ್ಯಪಾಲರ ಬಳಿಗೆ ಹೋಗುವ ಮುನ್ನ ಮೂವರು ನಾಯಕರು ಭೇಟಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ನಂತರ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.