ನವದೆಹಲಿ: ಸೈಬರ್ ವಂಚನೆ ಪ್ರಕರಣ ಸಂಬಂಧ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 76 ಸ್ಥಳಗಳಲ್ಲಿ ಗುರುವಾರ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ.
‘ಆಪರೇಷನ್ ಚಕ್ರ–2’ ಅಡಿ ಉತ್ತರಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಕೇರಳ, ತಮಿಳುನಾಡು, ಪಂಜಾಬ್, ನವದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಏಕಕಾಲಕ್ಕೆ ಈ ಕಾರ್ಯಾಚರಣೆ ನಡೆದಿದೆ.
ಸೈಬರ್ ವಂಚನೆಗೆ ಸಂಬಂಧಿಸಿ ಸಿಬಿಐ ಐದು ಪ್ರಕರಣಗಳನ್ನು ದಾಖಲಿಸಿತ್ತು. ಇದರಲ್ಲಿ ಕ್ರಿಪ್ಟೊಕರೆನ್ಸಿ ಹೆಸರಿನಡಿ ಭಾರತೀಯ ಪ್ರಜೆಗಳಿಗೆ ₹100 ಕೋಟಿ ವಂಚಿಸಿರುವ ಪ್ರಕರಣವೂ ಸೇರಿದೆ. ಹಣಕಾಸು ಗುಪ್ತಚರ ಘಟಕ ನೀಡಿದ ಮಾಹಿತಿ ಆಧರಿಸಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲ್‌ಸೆಂಟರ್‌ಗಳ ಮೂಲಕ ತಂತ್ರಜ್ಞಾನದ ನೆರವು ನೀಡುವುದಾಗಿ ಅಮೆಜಾನ್ ಹಾಗೂ ಮೈಕ್ರೋಸಾಫ್ಟ್ ಕಂಪನಿಗಳಿಗೆ ವಂಚಿಸಿದ ಎರಡು ಪ್ರಕರಣ ದಾಖಲಾಗಿವೆ. ಹಾಗಾಗಿ, ಒಂಬತ್ತು ಕಾಲ್‌ಸೆಂಟರ್‌ಗಳ ಮೇಲೆ ದಾಳಿ ನಡೆದಿದೆ.
ಕಾರ್ಯಾಚರಣೆಯನ್ನು ಮುಂದುವರಿಸಿರುವುದರಿಂದ ಉಳಿದ ಎರಡು ಪ್ರಕರಣಗಳ ಬಗ್ಗೆ ಮಾಹಿತಿ ನೀಡಲಾಗುವುದಿಲ್ಲ. ಎಫ್‌ಬಿಐ, ಇಂಟರ್‌ಪೋಲ್ ಸೇರಿದಂತೆ ಅಂತರರಾಷ್ಟ್ರೀಯ ಗುಪ್ತಚರ ಏಜೆನ್ಸಿಗಳು ನೀಡಿದ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.