ಪಹಲ್ಗಾಮ್ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಗೆ ‘ಆಪರೇಷನ್ ಸಿಂಧೂರ’ದ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಭಾರತ. ಬುಧವಾರ ಅಂದರೆ, ಮೇ 7ರ ನಸುಕಿನ ವೇಳೆ ಕ್ಷಿಪಣಿಗಳ ಮೂಲಕ ಸೇನೆಯು ಈ ದಾಳಿ ನಡೆಸಿದೆ. ಈ ದಾಳಿಯಲ್ಲಿ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಲಷ್ಕರ್-ಎ-ತಯಬಾ ಅಂದ್ರೆ ಎಲ್ಇಟಿ ಮತ್ತು ಜೈಶ್-ಎ-ಮೊಹಮ್ಮದ್ ಅಂದ್ರೆ ಜೆಇಎಂ ಉಗ್ರ ಸಂಘಟನೆಗಳ ನೆಲೆಗಳನ್ನು ಧ್ವಂಸ ಮಾಡಿದೆ. ಭಯೋತ್ಪಾದಕರ 21 ನೆಲೆಗಳಲ್ಲಿ 9 ನೆಲೆಗಳ ಮೇಲೆ ಮಾತ್ರ ಸದ್ಯ ದಾಳಿ ನಡೆದಿದೆ. ಉಗ್ರರ ಈ ಅಡಗುದಾಣಗಳಲ್ಲಿ ವಿಶ್ವವೇ ಬೆಚ್ಚಿ ಬೀಳುವಂತಹ ಚಟುವಟಿಕೆ ನಡೆಯುತ್ತಿತ್ತು ಎಂದು ಸೇನೆಯ ಅಧಿಕಾರಿಗಳು ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.