ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ವಿಶೇಷ ಪಠ್ಯಕ್ರಮ (ಸ್ಪೆಷಲ್ ಕ್ಲಾಸ್ರೂಮ್ ಮಾಡ್ಯೂಲ್) ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಪಠ್ಯಕ್ರಮವು 3ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭಾರತದ ರಕ್ಷಣಾ ಕಾರ್ಯತಂತ್ರ ಹಾಗೂ ರಾಜತಾಂತ್ರಿಕ ಪ್ರತಿಕ್ರಿಯೆಗಳ ಬಗ್ಗೆ ಅರ್ಥೈಸಿಕೊಳ್ಳಲು ನೆರವಾಗಲಿದೆ ಎಂದೂ ತಿಳಿದುಬಂದಿದೆ.

ಪಠ್ಯಕ್ರಮವು ಎರಡು ವಿಭಾಗಗಳನ್ನು ಹೊಂದಿರಲಿದ್ದು, ಮೊದಲನೆಯದು 3ರಿಂದ 8ನೇ ತರಗತಿ ವಿದ್ಯಾರ್ಥಿಗಳು ಅರ್ಥೈಸಿಕೊಳ್ಳುವಂಥದ್ದಾಗಿರಲಿದೆ. ಮತ್ತೊಂದು 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ರಚಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಅಲ್ಲದೇ, ಈ ಪಠ್ಯಕ್ರಮದಲ್ಲಿ 8 ರಿಂದ 10 ಪುಟಗಳು ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಅದಕ್ಕೆ ಭಾರತದ ರಕ್ಷಣಾ ಪಡೆಗಳ ತಿರುಗೇಟಿನ ಮಾಹಿತಿಗಳನ್ನು ಒಳಗೊಂಡಿರಲಿದೆ ಎಂದೂ ಮೂಲಗಳು ತಿಳಿಸಿವೆ.

ಭಯೋತ್ಪಾದಕ ಬೆದರಿಕೆಗಳಿಗೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ? ರಕ್ಷಣಾ ವಿಚಾರ, ರಾಜತಾಂತ್ರಿಕತೆ ಮತ್ತು ರಾಷ್ಟ್ರೀಯ ಭದ್ರತೆಯಲ್ಲಿ ಸಚಿವಾಲಯಗಳ ನಡುವಿನ ಸಮನ್ವಯತೆಯ ಪಾತ್ರ ಹೇಗಿರಲಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಈ ಪಠ್ಯಕ್ರಮ ರಚಿಸಲಾಗುತ್ತಿದೆ ಎಂದೂ ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.