ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕಾಂಗ್ರೆಸ್ ಗೈರು: ಸಂಸದ ಶಶಿ ತರೂರ್ ಸಮರ್ಥನೆ

Published 27 ಜನವರಿ 2024, 15:55 IST
Last Updated 27 ಜನವರಿ 2024, 15:55 IST
ಅಕ್ಷರ ಗಾತ್ರ

ಕೋಲ್ಕತ್ತ: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಮೂರ್ತಿಯ  ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ ಕಾಂಗ್ರೆಸ್ ನಾಯಕತ್ವದ ತೀರ್ಮಾನವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ.  

ಈ ಕುರಿತು ಮಾತನಾಡಿದ ಅವರು, ‘ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ನಾಯಕರು ಭಾಗಿಯಾಗಿದ್ದರೆ, ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಈ ಕಾರ್ಯಕ್ರಮದಲ್ಲಿ ಪೋಷಕ ಪಾತ್ರಗಳ ರೀತಿ ಮೂಲೆಗುಂಪು ಮಾಡಲಾಗುತ್ತಿತ್ತು. ಆದರೆ, ಅಂಥ ಪೋಷಕ ಪಾತ್ರ ನಿರ್ವಹಿಸುವ ಅನಿವಾರ್ಯ ಕಾಂಗ್ರೆಸ್‌ಗೆ ಇಲ್ಲ’ ಎಂದು ಹೇಳಿದ್ದಾರೆ. 

ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ದೇವಸ್ಥಾನಕ್ಕೆ ಹೋಗುವ ಇಂಗಿತ ವ್ಯಕ್ತಪಡಿಸಿರುವ ಅವರು, ‘ಈ ವಿಚಾರದಲ್ಲಿ ಕಾಂಗ್ರೆಸ್ ನಿಲುವು ತುಂಬಾ ಸ್ಪಷ್ಟವಾಗಿದೆ. ಕಾಂಗ್ರೆಸ್ ಸದಸ್ಯರು ತಮಗೆ ಇಷ್ಟವಿರುವ ಧಾರ್ಮಿಕ ಮತ್ತು ನಂಬಿಕೆಗಳನ್ನು ಆಚರಿಸುವ ಸ್ವಾತಂತ್ರ್ಯ ಹೊಂದಿದ್ದಾರೆ. ಪ್ರತಿಯೊಬ್ಬರ ಧರ್ಮವನ್ನು ಕಾಂಗ್ರೆಸ್ ಗೌರವಿಸುತ್ತದೆ. ಹೀಗಾಗಿ ನಾನು ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಹೋಗುತ್ತೇನೆಯೇ ಹೊರತು ರಾಜಕೀಯ ಕಾರ್ಯಕ್ರಮಗಳಿಗೆ ಅಲ್ಲ’ ಎಂದು ಹೇಳಿದ್ದಾರೆ. 

ರಾಮ ಅಥವಾ ಯಾವುದೇ ಹಿಂದೂ ದೇವರುಗಳ ಮೇಲೆ ಬಿಜೆಪಿಗೆ ಏಕಸ್ವಾಮ್ಯ ಅಧಿಕಾರ ಇಲ್ಲ ಎಂಬುದನ್ನು ದೇಶದ ಜನತೆ ಅರ್ಥೈಸಿಕೊಳ್ಳಬೇಕು ಎಂದೂ ಇದೇ ವೇಳೆ ಹೇಳಿದ್ದಾರೆ. 

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಅವರಿಗೆ ಬಾಲರಾಮ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ, ಈ ಆಹ್ವಾನವನ್ನು ಅವರು ಗೌರವಯುತವಾಗಿ ತಿರಸ್ಕರಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT