ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ವಿಷಯ ಚರ್ಚೆಗೆ ವಿಪಕ್ಷಗಳ ಅಡ್ಡಿ: ಪ್ರಧಾನಿ ನರೇಂದ್ರ ಮೋದಿ

Published 12 ಆಗಸ್ಟ್ 2023, 11:25 IST
Last Updated 12 ಆಗಸ್ಟ್ 2023, 11:25 IST
ಅಕ್ಷರ ಗಾತ್ರ

ಕೋಲ್ಕತ್ತ: ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ ವಿಪಕ್ಷಗಳು ಸಂಸತ್ತಿನಿಂದ ಪಲಾಯನಗೈದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಮಣಿಪುರ ವಿಷಯದಲ್ಲಿ ಚರ್ಚೆ ನಡೆಸಲು ವಿಪಕ್ಷಗಳು ಬಯಸಿರಲಿಲ್ಲ. ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಅಪಪ್ರಚಾರಕ್ಕೂ ಸೋಲಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ರಾಜ್ ಪರಿಷತ್ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ಪ್ರಧಾನಿ, ಎರಡು ದಿನಗಳ ಹಿಂದೆ ವಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನೂ ಸೋಲಿಸಿದ್ದೇವೆ. ದೇಶದಾದ್ಯಂತ ನಕಾರಾತ್ಮಕತೆ ಹರಡುವುದನ್ನೂ ಸೋಲಿಸಿದ್ದೇವೆ. ವಿರೋಧ ಪಕ್ಷಗಳು ಸದನದಿಂದ ಓಡಿ ಹೋಗಿರುವುದನ್ನು ಇಡೀ ದೇಶವೇ ನೋಡಿದೆ. ವಿಪಕ್ಷಗಳು ಮಣಿಪುರದ ಜನತೆಗೆ ದ್ರೋಹ ಬಗೆದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಣಿಪುರದ ವಿಷಯದ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಬಯಸಿಲ್ಲ. ಎಲ್ಲವನ್ನೂ ರಾಜಕೀಯಗೊಳಿಸುವುದರಲ್ಲಿ ಮುಳುಗಿತ್ತು. ಅವರಿಗೆ ಜನರ ಕಷ್ಟ, ನೋವುಗಳ ಬಗ್ಗೆ ಕಾಳಜಿ ಇರಲಿಲ್ಲ. ಅದಕ್ಕಾಗಿಯೇ ಅವಿಶ್ವಾಸ ನಿರ್ಣಯ ಮಂಡಿಸಿ ಚರ್ಚೆಯಿಂದ ದೂರ ಉಳಿದು, ರಾಜಕೀಯ ಮಾಡಿದ್ದರು ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT