ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರದಲ್ಲಿ ಭಾರತದ ಕಲ್ಪನೆ ಪುನರ್ ನಿರ್ಮಾಣ: ಪ್ರಧಾನಿಗೆ ರಾಹುಲ್ ತಿರುಗೇಟು

Published 25 ಜುಲೈ 2023, 9:37 IST
Last Updated 25 ಜುಲೈ 2023, 9:37 IST
ಅಕ್ಷರ ಗಾತ್ರ

ನವದೆಹಲಿ: 'ಇಂಡಿಯಾ' ನೇತತ್ವದಲ್ಲಿ ವಿರೋಧ ಪಕ್ಷಗಳು ಮಣಿಪುರದಲ್ಲಿ ಭಾರತದ ಕಲ್ಪನೆ ಪುನರ್ ನಿರ್ಮಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ನಮ್ಮನ್ನು ಏನೂ ಬೇಕಾದರೂ ಕರೆಯಿರಿ. ಆದರೆ ನಾವು 'ಇಂಡಿಯಾ' ಆಗಿದ್ದು, ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಪುನರ್ ನಿರ್ಮಿಸಲಿದ್ದೇವೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಪರಿಸ್ಥಿತಿ ಸುಧಾರಿಸಲು ನಾವು ನೆರವಾಗಲಿದ್ದೇವೆ. ಪ್ರತಿಯೊಬ್ಬ ಮಹಿಳೆ ಮತ್ತು ಮಗುವಿನ ಕಣ್ಣೀರು ಒರೆಸುತ್ತೇವೆ. ನಾವು ಮಣಿಪುರದಲ್ಲಿ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರಲಿದ್ದೇವೆ ಎಂದು ಹೇಳಿದ್ದಾರೆ.

ಈ ಮೊದಲು ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ (INDIA)ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಪ್ರತಿಪಕ್ಷಗಳಿಗೆ ದಿಕ್ಕು ತೋಚದಂತಹ ಪರಿಸ್ಥಿತಿ ಎದುರಾಗಿದ್ದು, ಈಸ್ಟ್ ಇಂಡಿಯಾ ಕಂಪನಿ, ಇಂಡಿಯನ್ ಮುಜಾಹಿದ್ದೀನ್‌ದಲ್ಲೂ ಇಂಡಿಯಾ ಅಡಗಿತ್ತು. ಹಾಗಾಗಿ ದೇಶದ ಹೆಸರನ್ನು ಬಳಸಿ ಜನರನ್ನು ದಾರಿ ತಪ್ಪಿಸಲಾಗದು ಎಂದು ಟೀಕಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT