ಮುಂಬೈ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಗುರುವಾರ ಭೇಟಿಯಾಗಿ ಮಹತ್ವದ ರಾಜಕೀಯ ಮಾತುಕತೆ ನಡೆಸಿದ್ದಾರೆ.
ಇಲ್ಲಿನ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇವರೊಂದಿಗೆ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹಾಗೂ ಸಂಜಯ್ ಝಾ ಸಹ ಇದ್ದರು.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ನಿತೀಶ್ ಕುಮಾರ್ ಈ ಭೇಟಿ ಮಾಡಿದ್ದಾರೆ. ಇದೇ ದಿನ ಸಂಜೆ ಎನ್ಸಿಪಿ ನಾಯಕ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಇದೇ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ.
#WATCH | "Those who are at the Centre are not working for the country...All political parties in the country need to unite to work together," says Bihar CM & JD(U) leader Nitish Kumar during his meeting with Uddhav Thackeray in Mumbai. pic.twitter.com/BDXrUQajfe