ನವದೆಹಲಿ: ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ಮಂಗಳವಾರ ಇಂಡಿಯಾ ಬಣದ ಪಕ್ಷಗಳ ಹಲವಾರು ಸಂಸದರು ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿ, ಮತದಾರರ ಪಟ್ಟಿ ಪರಿಷ್ಕರಣೆ ರದ್ದುಗೊಳಿಸುವಂತೆ ಒತ್ತಾಯಿಸಿದರು.

ಸಂಸತ್ತಿನಲ್ಲಿ ದಿನದ ಕಾರ್ಯಕಲಾಪ ಆರಂಭಕ್ಕೂ ಮುಂಚಿತವಾಗಿ, ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಆರ್ಜೆಡಿ ಮತ್ತು ಎಡ ಪಕ್ಷಗಳ ಸದಸ್ಯರು ಸೇರಿದಂತೆ ವಿರೋಧ ಪಕ್ಷದ ಹಲವಾರು ಸಂಸದರು ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ಪ್ರತಿಭಟನೆಯಲ್ಲಿ ಭಾಗವಹಿಸಿ ಘೋಷಣೆಗಳನ್ನು ಕೂಗಿದರು.

ವೋಟ್ ಕಿ ಚೋರಿ ಬಂದ್ ಕರೋ (ಮತ ಕಳ್ಳತನ ನಿಲ್ಲಿಸಿ) ಮತ್ತು ಎಸ್ಐಆರ್ ವಾಪಸ್ ಲೋ (ರೋಲ್ಬ್ಯಾಕ್ ಎಸ್ಐಆರ್) ನಂತಹ ಘೋಷಣೆಗಳನ್ನು ಕೂಗಿದರು.

ವಿರೋಧ ಪಕ್ಷದ ಸಂಸದರು ಮತ ಲೂಟಿ ನಿಲ್ಲಿಸಿ ಎಂದು ಬರೆದಿರುವ ಫಲಕಗಳು ಮತ್ತು ಚುನಾವಣಾ ಆಯೋಗ ಹಾಗೂ ಸರ್ಕಾರದ ನಡುವಿನ ಹೊಂದಾಣಿಕೆ ಚಿತ್ರಿಸಿರುವ ಫಲಕಗಳನ್ನು ಸಹ ಹಿಡಿದಿದ್ದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟಿಸುತ್ತಿರುವ ಪ್ರತಿಪಕ್ಷಗಳು, ಚುನಾವಣಾ ಆಯೋಗದ ಈ ಪ್ರಕ್ರಿಯೆ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿವೆ. ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.