ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

92 ಸಂಸದರ ಅಮಾನತು: ಗಾಂಧಿ ಪ್ರತಿಮೆ ಎದುರು ‘ಇಂಡಿಯಾ’ ಪ್ರತಿಭಟನೆ

Published 19 ಡಿಸೆಂಬರ್ 2023, 7:21 IST
Last Updated 19 ಡಿಸೆಂಬರ್ 2023, 7:21 IST
ಅಕ್ಷರ ಗಾತ್ರ

ನವದೆಹಲಿ: ವಿಪಕ್ಷಗಳ 92 ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸಂಸದರು ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸಂಸತ್ ಭದ್ರತಾ ವೈಫಲ್ಯದ ಕುರಿತಂತೆ ಸದನದ ಮುಂದೆ ಗೃಹಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳ ಸಂಸದರು ಕಲಾಪಕ್ಕೆ ಅಡ್ಡಿಪಡಿಸಿದ್ದರು. ಈ ವಿಚಾರವಾಗಿ ರಾಜ್ಯಸಭೆ ಮತ್ತು ಲೋಕಸಭೆಯಿಂದ ಇಲ್ಲಿಯವರಗೆ ಒಟ್ಟು 92 ಸಂಸದರನ್ನು ಅಮಾನತು ಮಾಡಲಾಗಿದೆ.

ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಸಂಸದರು, ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿದ್ದಾರೆ. ಪೋಸ್ಟರ್‌ಗಳನ್ನು ಪ್ರದರ್ಶಿಸುವುದರ ಮೂಲಕ ಸಂಸದರ ಅಮಾನತಿಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಏತನ್ಮಧ್ಯೆ, ಸಂಸತ್ತಿನ ಕಲಾಪಗಳ ಅಣಕು ಪ್ರದರ್ಶನವನ್ನೂ ನಡೆಸಲಾಗಿದ್ದು, ತೃಣಮೂಲ ಕಾಂಗ್ರೆಸ್‌ನ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಸಭಾಧ್ಯಕ್ಷರ ಹಾವಭಾವಗಳನ್ನು ಅನುಕರಣೆ ಮಾಡಿ ತೋರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT