ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ಕೋರಿ ವಿರೋಧ ಪಕ್ಷಗಳು ಶುಕ್ರವಾರ ರಾಜ್ಯಸಭೆಯಲ್ಲಿ ಹೊಸ ನೋಟಿಸ್ ಸಲ್ಲಿಸಿವೆ ಎಂದು ಮೂಲಗಳು ತಿಳಿಸಿವೆ.

‘ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಪಕ್ಷಪಾತ ತೋರುವುದನ್ನು ಮುಂದುವರಿಸಿದ್ದಾರೆ’ ಎಂಬ ಹೊಸ ಆರೋಪವನ್ನು ಸಿಇಸಿ ವಿರುದ್ಧ ಮಾಡಲಾಗಿದೆ.

ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಏಪ್ರಿಲ್ 18ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ನೀಡಿದ ದೂರಿನ ಬಗ್ಗೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಟಿಎಂಸಿ ನಾಯಕಿ ಸಾಗರಿಕಾ ಘೋಷ್ ಅವರು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಸಲ್ಲಿಸಿದ್ದಾರೆ. ನೋಟಿಸ್ಗೆ 50 ಸಹಿಗಳ ಅವಶ್ಯಕತೆಯಿದ್ದು, ರಾಜ್ಯಸಭೆಯ 73 ಸದಸ್ಯರು ಸಹಿ ಹಾಕಿದ್ದಾರೆ.

ಕಾಂಗ್ರೆಸ್, ಎಸ್ಪಿ, ಡಿಎಂಕೆ, ಎಡಪಕ್ಷಗಳು, ಶಿವಸೇನಾ (ಯುಬಿಟಿ), ಎನ್ಸಿಪಿ (ಎಸ್ಪಿ), ಆರ್ಜೆಡಿ, ಐಯುಎಂಎಲ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಕುರಿತು ವಿರೋಧ ಪಕ್ಷಗಳು ಈ ಮುನ್ನ ಸಂಸತ್ನ ಎರಡೂ ಸದನಗಳಲ್ಲಿ ನೀಡಿದ್ದ ನೋಟಿಸ್ಅನ್ನು ತಿರಸ್ಕರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.