ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಇಂದಿನಿಂದ ಆರಂಭವಾಗಿದ್ದು, ಅಧಿವೇಶನಕ್ಕೂ ಮುನ್ನ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಪಕ್ಷಗಳ ಮುಖಂಡರ ಸಭೆ ನಡೆಸಿದರು.

11 ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಹಾಜರಿದ್ದರು. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಾಯಕರು ಸಭೆಗೆ ಗೈರಾಗಿದ್ದರು.

ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಐಯುಎಂಎಲ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಸಿಪಿಐ-ಎಂ, ಆರ್‌ಎಸ್‌ಪಿ, ಲೋಕತಾಂತ್ರಿಕ ಜನತಾ ಸೇರಿದಂತೆ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ದಳ (ಎಲ್‌ಜೆಡಿ), ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಎಂಡಿಎಂಕೆ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ 700 ರೈತರ ಕುಟುಂಕ್ಕೆ ಪರಿಹಾರ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸುವ ಬಗ್ಗೆ ಸಭೆಯಲ್ಲಿ ಕೆಲ ವಿರೋಧ ಪಕ್ಷಗಳ ನಾಯಕರು ಧ್ವನಿ ಎತ್ತಿದ್ಧಾರೆ.

ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಇಂದೇ ಮಂಡನೆ ಮಾಡುವ ನಿರೀಕ್ಷೆ ಇದೆ. ಆದರೆ, ಮಸೂದೆ ಬಗ್ಗೆ ಚರ್ಚೆ ಮಾಡದೆಯೇ ಅಂಗೀಕರಿಸಲು ಬಿಡುವುದಿಲ್ಲ. ಚರ್ಚೆಗೆ ಅವಕಾಶ ಕೊಡದೇ ಇದ್ದರೆ, ಕಲಾಪ ಸುಗಮವಾಗಿ ನಡೆಯವುದಿಲ್ಲ ಎಂದು ವಿರೋಧ ಪಕ್ಷಗಳು ಎಚ್ಚರಿಕೆ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.