ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಟಿಪ್ರಾ ಮೋಥಾ ಶೀಘ್ರ ಸೇರ್ಪಡೆ

Published 6 ಮಾರ್ಚ್ 2024, 13:44 IST
Last Updated 6 ಮಾರ್ಚ್ 2024, 13:44 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರಾದ ಪ್ರಮುಖ ವಿರೋಧ ಪಕ್ಷ ಟಿಪ್ರಾ ಮೋಥಾ, ಲೋಕಸಭಾ ಚುನಾವಣೆಗೂ ಮೊದಲೇ ಬಿಜೆಪಿ ನೇತೃತ್ವದ ಸರ್ಕಾರದ ಜೊತೆ ಸೇರಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್‌ ಭಟ್ಟಾಚಾರ್ಯ ಬುಧವಾರ ತಿಳಿಸಿದರು.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿಪ್ರ ಮೋಥಾದ 13 ಶಾಸಕರಿದ್ದಾರೆ. ಪಕ್ಷವು ಎರಡು ಬಣಗಳಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದರು.

‘ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT