ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾತೂರ್: ಮದುವೆ ಆಮಂತ್ರಣ ಪತ್ರದಲ್ಲೂ ಇವಿಎಂಗೆ ವಿರೋಧ

Published 26 ಮೇ 2024, 23:56 IST
Last Updated 26 ಮೇ 2024, 23:56 IST
ಅಕ್ಷರ ಗಾತ್ರ

ಲಾತೂರ್: ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಮದುವೆ ಆಮಂತ್ರಣ ಪತ್ರದಲ್ಲಿ ಎಲೆಕ್ಟ್ರಾನಿಕ್‌ ಮತ ಯಂತ್ರದ (ಇವಿಎಂ) ಬಗೆಗಿನ ಅಸಮಾಧಾನವನ್ನು ಹೊರಹಾಕಿದ್ದಾರೆ.

ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯ ಅಜಾನ್‌ಸೊಂದ ನಿವಾಸಿಯಾದ ದೀಪಕ್‌ ಕಾಂಬ್ಳೆ ಅವರು ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಇವಿಎಂ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ’ ಎಂಬ ಸಂದೇಶವನ್ನು ನೀಡಿದ್ದಾರೆ.

'ನನ್ನ ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ಅರಿವು ಮೂಡಿಸುವ ಸಲುವಾಗಿ, ಇವಿಎಂ ಬಗೆಗಿನ ವಿರೋಧವನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಸ್ತಾಪಿಸಿದ್ದೇನೆ’ ಎಂದು ಅವರು ತಿಳಿಸಿದ್ದಾರೆ. 

ಜೂನ್‌ 8ರಂದು ಅವರ ವಿವಾಹ ನಡೆಯಲಿದ್ದು, ಆಮಂತ್ರಣ ಪತ್ರಿಕೆಯಲ್ಲಿ ಸಂತರು, ಸಾಮಾಜಿಕ ಸುಧಾರಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಮತ್ತು ಅವರ ಸಂದೇಶಗಳನ್ನೂ ಮುದ್ರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT