ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಇಂದು (ಸೋಮವಾರ) ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ಗೊತ್ತುವಳಿ ಮಂಡಿಸಲು ವಿರೋಧ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ.

ಸಂವಿಧಾನದ ವಿಧಿ 94-ಸಿ ಅಡಿಯಲ್ಲಿ ಈ ನಿರ್ಣಯವನ್ನು ಮಂಡಿಸಲಾಗುತ್ತಿದೆ.

ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡದಿರುವುದು, ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕ್ರಮ ಕೈಗೊಳ್ಳದಿರುವುದು, ಕಾಂಗ್ರೆಸ್ನ ಮಹಿಳಾ ಸಂಸದರ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸಿರುವುದು ಮತ್ತು 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ನೋಟಿಸ್ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಲೋಕಸಭೆಯಲ್ಲಿ ಶೀಘ್ರದಲ್ಲೇ ನಿರ್ಣಯ ಮಂಡಿಸಲಾಗುವುದು ಮತ್ತು ಸಂಸದರ ಸಹಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ನಿರ್ಣಯಕ್ಕೆ ಲೋಕಸಭೆಯಲ್ಲಿ 100 ಸಂಸದರು ಸಹಿ ಹಾಕುವ ಸಾಧ್ಯತೆಯಿದ್ದು, ವಿವಿಧ ವಿರೋಧ ಪಕ್ಷಗಳ ಸಂಸದರ ಸಹಿ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಇಂದು ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ ಎಂದು ವಿರೋಧ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಗೊತ್ತುವಳಿ ಮಂಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಡಪಕ್ಷಗಳಾದ, ಡಿಎಂಕೆ, ಎಸ್ಪಿ, ಆರ್ಜೆಡಿ, ಶಿವಸೇನಾ (ಯುಬಿಟಿ) , ಎನ್ಸಿಪಿ (ಎಸ್ಪಿ) ಮತ್ತು ಆರ್ಎಸ್ಪಿ ಸೇರಿದಂತೆ ಇತರ ಪಕ್ಷಗಳ ಜೊತೆಗೆ ಟಿಎಂಸಿ ಕೂಡ ಸಭೆಯಲ್ಲಿ ಭಾಗವಹಿಸಿತ್ತು.

ಇದು ಲೋಕಸಭಾ ಸ್ಪೀಕರ್ ವಿರುದ್ಧ ಸಲ್ಲಿಸಲಾಗುತ್ತಿರುವ ನಾಲ್ಕನೇ ನೋಟಿಸ್ ಆಗಲಿದೆ.

ಮೊದಲ ಬಾರಿಗೆ ಎಂ.ವಿ ಮಾಲವಂಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆದರೆ ಅದಕ್ಕೆ ಸೋಲಾಗಿತ್ತು. ನಂತರ, ಆಗಿನ ಸ್ಪೀಕರ್ ಹುಕುಮ್ ಸಿಂಗ್ ವಿರುದ್ಧ ಗೊತ್ತುವಳಿ ನಿರ್ಣಯ ಮಂಡಿಸಲಾಗಿತ್ತು. ಆದರೆ ಸದನದಲ್ಲಿ ಸಂಖ್ಯಾಬಲದ ಕೊರತೆಯಿಂದಾಗಿ ಅದನ್ನು ಅಂಗೀಕರಿಸಲು ಸಾಧ್ಯವಾಗಿರಲಿಲ್ಲ. ಮೂರನೆಯದಾಗಿ ಅಂದಿನ ಸ್ಪೀಕರ್ ಬಲರಾಮ್ ಜಾಖಡ್ ವಿರುದ್ಧವೂ ಅವಿಶ್ವಾಸ ಮಂಡಿಸಲಾಗಿದ್ದು, ಅದಕ್ಕೂ ಕೂಡ ಸೋಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.