ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಸರ್ಕಾರದಿಂದ ಅಧಿಕಾರಿಗಳಿಗೆ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ: ಕೇಂದ್ರ ಸರ್ಕಾರ

Published 17 ಜುಲೈ 2023, 21:57 IST
Last Updated 17 ಜುಲೈ 2023, 21:57 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಚುನಾಯಿತ ಸರ್ಕಾರವು ನಿರ್ದಿಷ್ಟವಾಗಿ ಗುಪ್ತದಳ ಇಲಾಖೆಯ ಕೆಲವು ಅಧಿಕಾರಿಗಳನ್ನು ಗುರಿಯಾಗಿಸಿ ಕ್ರಮಕೈಗೊಂಡಿದ್ದರಿಂದಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಲಾಯಿತು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಕೇಂದ್ರ ಪ್ರಮಾಣಪತ್ರವನ್ನು ಸಲ್ಲಿಸಿದೆ. ಸಾರ್ವಜನಿಕ ಸೇವೆ, ಪೊಲೀಸ್, ಭೂಮಿಯನ್ನು ಹೊರತುಪಡಿಸಿ ಇತರೆ ಆಡಳಿತದ ಮೇಲೆ ದೆಹಲಿ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್‌ ಮೇ 11ರಂದು ತೀರ್ಪು ನೀಡಿತ್ತು.

ರಾಜಕೀಯ ಸೂಕ್ಷ್ಮತೆಯುಳ್ಳ ಪ್ರಕರಣಗಳು ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಭ್ರಷ್ಟಾಚಾರ ದೂರುಗಳನ್ನು ಗಮನಿಸುವ ಗುಪ್ತದಳ ಇಲಾಖೆಯ ಅಧಿಕಾರಿಗಳನ್ನೇ ಗುರಿಯಾಗಿಸಿ ಚುನಾಯಿತ ಸರ್ಕಾರವು ಕ್ರಮಕೈಗೊಳ್ಳುತ್ತಿತ್ತು. ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿತ್ತು ಎಂದೂ ಪ್ರಮಾಣಪತ್ರದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT