ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PM-Surya Ghar: Muft Bijli Yojana | ಈವರೆಗೆ ಒಂದು ಕೋಟಿ ನೋಂದಣಿ: ಮೋದಿ

Published 16 ಮಾರ್ಚ್ 2024, 4:27 IST
Last Updated 16 ಮಾರ್ಚ್ 2024, 4:27 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಸೌರ ವಿದ್ಯುತ್ ಬಳಕೆಗೆ ಉತ್ತೇಜನ ನೀಡಲು ಆರಂಭಿಸಿರುವ 'ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' ಅಡಿಯಲ್ಲಿ ಈಗಾಗಲೇ ಒಂದು ಕೋಟಿಗೂ ಹೆಚ್ಚು ಕುಟುಂಬಗಳು ನೋಂದಾಯಿಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ಇದೊಂದು ಅತ್ಯುತ್ತಮ ಸುದ್ದಿ. ದೇಶದ ಎಲ್ಲ ಭಾಗಗಳಿಂದ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಅಸ್ಸಾಂ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ನೋಂದಣಿ ದಾಖಲಾಗಿವೆ' ಎಂದು ಹೇಳಿದ್ದಾರೆ.

ಈ ಯೋಜನೆ ಅಡಿಯಲ್ಲಿ ಇನ್ನೂ ಕೂಡ ನೋಂದಣಿ ಮಾಡದವರು ಆದಷ್ಟು ಬೇಗನೇ ನೋಂದಣಿ ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಮನೆಯ ವಿದ್ಯುತ್ ವೆಚ್ಚದಲ್ಲಿ ಗಣನೀಯವಾಗಿ ಕಡಿತ ಉಂಟಾಗುವ ಭರವಸೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

₹75,021 ಕೋಟಿ ಮೊತ್ತದ ಈ ಯೋಜನೆಗೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಇದರಡಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ತಲಾ 300 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಪೊರೈಸುವ ಗುರಿ ಹೊಂದಲಾಗಿದೆ. ಮನೆಯ ತಾರಸಿ ಮೇಲೆ ಸೌರ ವಿದ್ಯುತ್ ಫಲಕ ಅಳವಡಿಸಿಕೊಳ್ಳಲು ಮುಂದಾಗುವ ಪ್ರತಿ ಕುಟುಂಬಕ್ಕೆ ಯೋಜನೆಯಡಿ ಸಬ್ಸಿಡಿ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT