ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹1,600 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ದೆಹಲಿ ಪೊಲೀಸರು

Published 21 ಫೆಬ್ರುವರಿ 2024, 2:38 IST
Last Updated 21 ಫೆಬ್ರುವರಿ 2024, 2:38 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಪೊಲೀಸರು 2009 ಮತ್ತು 2023ರ ನಡುವೆ ವಶಪಡಿಸಿಕೊಂಡ ₹1,600 ಕೋಟಿ ಮೌಲ್ಯದ 10 ಟನ್‌ಗೂ ಹೆಚ್ಚು  ಡ್ರಗ್ಸ್‌ ನಾಶಪಡಿಸಿದ್ದಾರೆ.

ದೆಹಲಿ ಲೆಫ್ಟಿನೆಂಟ್‌ ಗವರ್ನರ್ ವಿ.ಕೆ. ಸಕ್ಸೇನಾ ಅವರ ಸಮ್ಮುಖದಲ್ಲಿ ಮಾದಕವಸ್ತು (ಡ್ರಗ್ಸ್‌)ವನ್ನು ನಾಶಪಡಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಗವರ್ನರ್ ವಿ.ಕೆ. ಸಕ್ಸೇನಾ, ಕಳೆದ 14 ವರ್ಷಗಳಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತು ನಾಶಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ‘ಡ್ರಗ್ಸ್‌ ಮುಕ್ತ ಭಾರತ‘ ಮಾಡುವ ನಿಟ್ಟಿನಲ್ಲಿ ಇದು ಒಂದು ದೊಡ್ಡ ಹೆಜ್ಜೆಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ. 

ಯುವಕರು ಡ್ರಗ್ಸ್‌ ವಿರುದ್ಧ ದೃಢವಾಗಿ ನಿಲ್ಲುವಂತೆ ಕರೆ ನೀಡಿದ ಅವರು, ಪೊಲೀಸರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿ ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT