ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ: 1,375 ಕೈದಿಗಳಿಗೆ ಕೊರೊನಾವೈರಸ್ ಸೋಂಕು

Last Updated 28 ಆಗಸ್ಟ್ 2020, 7:18 IST
ಅಕ್ಷರ ಗಾತ್ರ

ಅಮರಾವತಿ:ಆಂಧ್ರಪ್ರದೇಶದ ವಿವಿಧ ಜೈಲುಗಳಲ್ಲಿ ಒಟ್ಟು 1,375 ಕೈದಿಗಳು ಈವರೆಗೆ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದುಕಾರಾಗೃಹದ ಮಹಾನಿರ್ದೇಶಕ ಮೊಹಮ್ಮದ್ ಅಹ್ಸಾನ್ ರೆಜಾ ಗುರುವಾರ ತಿಳಿಸಿದ್ದಾರೆ.

ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದ ಸಂದರ್ಭದಲ್ಲಿ ಐವರು ಪಾರಾರಿಯಾಗಿದ್ದಾರೆ. ಅವರ ಪತ್ತೆ ಕಾರ್ಯ ನಡೆಯುತ್ತಿದೆ.ಒಟ್ಟು ಸೋಂಕಿತರಲ್ಲಿ 380 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. 873 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದರು.

‘ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಹುತೇಕರಿಗೆ ರೋಗ ಲಕ್ಷಣಗಳೇ ಇಲ್ಲ.ನಾಲ್ಕು ಕೇಂದ್ರ ಕಾರಾಗೃಹ ಸೇರಿದಂತೆ 41 ಕಾರಾಗೃಹಗಳ 241 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ನಾಲ್ವರು ಮೃತರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT