ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್ಮಾನ್ | 1.54 ಲಕ್ಷ ಆರೋಗ್ಯ ಕೇಂದ್ರಗಳ ಪರಿವರ್ತನೆ: ಮಾಂಡವೀಯ

Last Updated 12 ಜನವರಿ 2023, 15:46 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿನ 1.54 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಉಪ ಆರೋಗ್ಯ ಕೇಂದ್ರಗಳನ್ನು ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್‌ನ (ಎನ್‌ಎಚ್‌ಎಂ) ಸಭೆಯಲ್ಲಿ ಮಾತನಾಡಿದ ಮಾಂಡವಿಯಾ, 2022ರ ಡಿಸೆಂಬರ್ 31 ರ ವೇಳೆಗೆ 1.50 ಲಕ್ಷ ಆಯುಷ್ಮಾನ್ ಭಾರತ್ ಕೇಂದ್ರ ಪ್ರಾರಂಭಿಸುವ ಗುರಿಯನ್ನು ತಲುಪಿದ್ದೇವೆ. 2018 ರಿಂದ ಈವರೆಗೆ 135 ಕೋಟಿಗೂ ಹೆಚ್ಚು ಜನ ಈ ಕೇಂದ್ರಗಳ ಪ್ರಯೋಜನ ಪಡೆದಿದ್ದಾರೆ ಎಂದರು.

ಕೇಂದ್ರ ಸರ್ಕಾರವು ಕೈಗೊಂಡಿರುವ ಸಮಗ್ರ ಅಭಿವೃದ್ಧಿ ಕಾರ್ಯಸೂಚಿಯಲ್ಲಿ ಮೊದಲ ಬಾರಿಗೆ ಆರೋಗ್ಯ ಕ್ಷೇತ್ರವನ್ನು ಸೇರಿಸಲಾಗಿದೆ. ಕೋವಿಡ್‌ ಅವಧಿಯು ನಮ್ಮ ಆರೋಗ್ಯ ಮೂಲಸೌಕರ್ಯ ಮತ್ತು ವಿತರಣಾ ವ್ಯವಸ್ಥೆಯನ್ನು ಬಲಪಡಿಸಲು ನಮಗೆ ಅವಕಾಶವನ್ನು ಒದಗಿಸಿದೆ ಎಂದು ಅವರು ತಿಳಿಸಿದರು.

ವಸತಿ ಮತ್ತು ನಗರ ಅಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT