ನವದೆಹಲಿ: 2024ರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಭಾರತದ ಪೌರತ್ವವನ್ನು ತೊರೆದಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಈ ಕುರಿತು ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಲಿಖಿತ ಉತ್ತರ ನೀಡಿದ್ದಾರೆ.

‘ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, 2020ರಲ್ಲಿ 85,256, 2021ರಲ್ಲಿ 1,63,370, 2022ರಲ್ಲಿ 2,25,620, 2023ರಲ್ಲಿ 2,16,219 ಮತ್ತು 2024ರಲ್ಲಿ 2,06,378 ಜನರು ಭಾರತದ ಪೌರತ್ವವನ್ನು ತೊರೆದಿದ್ದಾರೆ’ ಎಂದು ಸಿಂಗ್ ಹೇಳಿದರು.

ಮುಂದುವರಿದು, ‘2011ರಲ್ಲಿ 1,22,819, 2012ರಲ್ಲಿ 1,20,923, 2013ರಲ್ಲಿ 1,31,405 ಮತ್ತು 2014ರಲ್ಲಿ 1,29,328 ಜನರು ಪೌರತ್ವ ತೊರೆದಿದ್ದಾರೆ’ ಎಂದು ತಿಳಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಮಾಹಿತಿ ಪ್ರಕಾರ ಒಟ್ಟಾರೆ 3,43,56,193 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.