ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌ನಿಂದ ಮಣಿಪುರಕ್ಕೆ ವಾಪಸಾದ 212 ಮೈತೇಯಿಗಳು

Published 18 ಆಗಸ್ಟ್ 2023, 21:27 IST
Last Updated 18 ಆಗಸ್ಟ್ 2023, 21:27 IST
ಅಕ್ಷರ ಗಾತ್ರ

ಇಂಫಾಲ್‌: ಮಣಿಪುರದಲ್ಲಿ ಜನಾಂಗೀಯ ಸಂಘರ್ಷದಿಂದ ಪಾರಾಗಲು ನೆರೆಯ ಮ್ಯಾನ್ಮಾರ್‌ ಗಡಿ ಪ್ರವೇಶಿಸಿದ್ದ ಮೈತೇಯಿ ಸಮುದಾಯದ 212 ಜನರು, ಮೂರು ತಿಂಗಳ ಬಳಿಕ ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಶುಕ್ರವಾರ ಹೇಳಿದ್ದಾರೆ.

ಇವರನ್ನು ಕರೆತರುವಲ್ಲಿ ಭಾರತೀಯ ಸೇನೆ ಮಹತ್ವದ ಪಾತ್ರ ನಿರ್ವಹಿಸಿದೆ ಎಂದು ಅವರು ‘ಎಕ್ಸ್‌’ನಲ್ಲಿ ಬರೆದಿದ್ದಾರೆ.

ಮಣಿಪುರದ ಮೊರೆಹ್‌ ಪಟ್ಟಣದಲ್ಲಿ ಮೇ 3ರಂದು ಅಶಾಂತಿಯ ವಾತಾವರಣ ಸೃಷ್ಟಿಯಾದಾಗ ಮೈತೇಯಿಯ 212 ಜನರು ಸುರಕ್ಷತೆ ಬಯಸಿ ಮ್ಯಾನ್ಮಾರ್‌ ಗಡಿ ಪ್ರವೇಶಿಸಿದ್ದರು. ಇದೀಗ ಅವರು ಭಾರತದ ನೆಲಕ್ಕೆ ಮರಳಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಮಣಿಪುರದಲ್ಲಿ ಮೇ 3ರಿಂದ ಆರಂಭವಾದ ಮೈತೇಯಿ ಮತ್ತು ಕುಕಿ ಸಮುದಾಯದವರ ನಡುವಿನ ಘರ್ಷಣೆಯಲ್ಲಿ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT