ಚಂಡೀಗಢ: ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರನ್ನು ವೈಭವೀಕರಿಸುವುದು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ 200ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದ 132 ಫೇಸ್‌ಬುಕ್ ಖಾತೆಗಳು ಮತ್ತು 71 ಇನ್‌ಸ್ಟಾಗ್ರಾಮ್ ಖಾತೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಅವರು ಹೇಳಿದ್ದಾರೆ.
‘ಈ ಖಾತೆಗಳಲ್ಲಿ ಕುಖ್ಯಾತ ದರೋಡೆಕೋರರ ಹೆಸರುಗಳನ್ನು ಬಳಸುವುದು, ಅವರನ್ನು ಹೊಗಳುವುದು ಮತ್ತು ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರನ್ನು ಹತ್ಯೆ ಮಾಡಿ ಫೋಟೊಗಳನ್ನು ಹಂಚಿಕೊಳ್ಳುವುದು ಮುಂತಾದ ಆಕ್ಷೇಪಾರ್ಹ ವಿಚಾರಗಳನ್ನು ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮಾಜದ ದುರ್ಬಲ ವರ್ಗಗಳನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದರು. ಘಟನೆಗಳ ಬಗ್ಗೆ ಕಿಡಿಗೇಡಿಗಳು ಪೊಲೀಸರಿಗೆ ಬೆದರಿಕೆ ಹಾಕುತ್ತಿದ್ದರು. ಇದುವರೆಗೆ 37 ಅಪರಾಧಿಗಳನ್ನು ಅಂತರರಾಜ್ಯ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.