ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂನಲ್ಲಿ 3 ವರ್ಷಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ

ಸಚಿವೆ ಅಜಂತಾ ನಿಯೋಗ್ ಮಾಹಿತಿ
Published 13 ಫೆಬ್ರುವರಿ 2024, 12:15 IST
Last Updated 13 ಫೆಬ್ರುವರಿ 2024, 12:15 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಕಳೆದ ಮೂರು ವರ್ಷಗಳಲ್ಲಿ 3,700ಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, ಅವರಲ್ಲಿ 3,400ಕ್ಕೂ ಹೆಚ್ಚು ಮಕ್ಕಳನ್ನು ವಿವಿಧ ಏಜೆನ್ಸಿಗಳು ರಕ್ಷಿಸಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಅಜಂತಾ ನಿಯೋಗ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ತಿಳಿಸಿದರು.

ರಕ್ಷಿಸಲ್ಪಟ್ಟ ಮಕ್ಕಳಲ್ಲಿ ಕೆಲವರನ್ನು ಪಾಲಕರ ಮಡಿಲಿಗೆ ಒಪ್ಪಿಸಲಾಗಿದೆ. ಉಳಿದವರನ್ನು ಸರ್ಕಾರವೇ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಶಾಸಕ ಭಾಸ್ಕರ್ ಜ್ಯೋತಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ಅಜಂತಾ, 2021ರಿಂದ 2023ರವರೆಗೆ ಒಟ್ಟು 3,779 ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಪೈಕಿ 3,419 ಮಕ್ಕಳನ್ನು ರಕ್ಷಿಸಲಾಗಿದೆ ಎಂದರು.

ತಮ್ಮ ಮನೆಗಳ ವಿಳಾಸವನ್ನು ನೀಡಿದ ಮಕ್ಕಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಆದರೆ ವಿಳಾಸವನ್ನು ನೀಡಲು ಸಾಧ್ಯವಾಗದ ಮಕ್ಕಳನ್ನು ಶಿಶುಪಾಲನಾ ಸಂಸ್ಥೆಗಳಲ್ಲಿ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ವರದಿಯಾಗುತ್ತಿವೆ. 2012ರಿಂದ 2023ರವರೆಗೆ ಪೋಕ್ಸೊ ಕಾಯ್ದೆ ಅಡಿಯಲ್ಲಿ 6,054 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 3,522 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT