ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್ಮಾನ್ ಭಾರತ್: 4 ಕೋಟಿ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಪರೀಕ್ಷೆ

ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಸಚಿವೆ ಸ್ಮೃತಿ ಇರಾನಿ ಮೆಚ್ಚುಗೆ
Last Updated 1 ಮೇ 2022, 14:00 IST
ಅಕ್ಷರ ಗಾತ್ರ

ಅಹಮದಾಬಾದ್: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶದಾದ್ಯಂತ 4.07 ಕೋಟಿಗಿಂತ ಹೆಚ್ಚು ಮಹಿಳೆಯರುಸ್ತನ ಕ್ಯಾನ್ಸರ್ ಪರೀಕ್ಷೆ, 3.16 ಕೋಟಿ ಮಂದಿಕುತ್ತಿಗೆಯ ಕ್ಯಾನ್ಸರ್ ಪರೀಕ್ಷೆಗೊಳಪಟ್ಟಿದ್ದಾರೆ ಎಂದು ಕೇಂದ್ರದ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಹೇಳಿದ್ದಾರೆ.

ಆರೋಗ್ಯ ಮತ್ತು ಫಾರ್ಮಾ ಉದ್ಯಮದಲ್ಲಿ ಸಬಲೀಕರಣದ ಉತ್ತುಂಗದ ಕುರಿತು ರಾಷ್ಟ್ರೀಯ ಸಮಾವೇಶದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದ ಅವರು, 'ಕಳೆದ 2 ವರ್ಷಗಳಲ್ಲಿ 45 ಕೋಟಿಗಿಂತ ಹೆಚ್ಚು ಮಹಿಳೆಯರು ತಮ್ಮ ಪ್ರಾಥಮಿಕ ಆರೋಗ್ಯ ಚಿಕಿತ್ಸೆಗಾಗಿ ಆಯುಷ್ಮಾನ್ ಭಾರತ ಯೋಜನೆ ಅಡಿ ಆರಂಭಿಸಲಾದ ಆರೋಗ್ಯ ಮತ್ತು ಕ್ಷೇಮದ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಮಹಿಳಾ ಫಲಾನುಭವಿಗಳ ಸಂಖ್ಯೆಯು ಔಷಧಶಾಸ್ತ್ರ ಮತ್ತು ಆರೋಗ್ಯ ರಕ್ಷಣೆಯಲ್ಲಿ ಮಹಿಳೆಯರ ಪಾತ್ರವನ್ನು ಹೆಚ್ಚಿಸಲು ಏಕೆ ಲಾಭದಾಯಕವಾಗಿದೆ ಎಂಬುದನ್ನು ತೋರಿಸುತ್ತದೆ' ಎಂದು ಹೇಳಿದರು.

ಅಲ್ಲದೆ, ಆರೋಗ್ಯ ಮತ್ತು ಫಾರ್ಮಾ ಕ್ಷೇತ್ರದಲ್ಲಿ ಮಹಿಳೆಯರ ಕುರಿತ ಪಕ್ಷಪಾತದ ವಿರುದ್ಧಬೇಸರ ವ್ಯಕ್ತಪಡಿಸಿದ ಅವರು, ಈ ಕ್ಷೇತ್ರದಲ್ಲಿ ಕೇವಲ 11ರಷ್ಟು ಮಹಿಳೆಯರಿದ್ದಾರೆ. ಸೇಲ್ಸ್ ಮತ್ತು ಮಾರ್ಕೆಟ್‌ನಲ್ಲಿ ಶೇ 5ರಷ್ಟು, ಉತ್ಪಾದನೆ ವಲಯದಲ್ಲಿ ಶೇ 12 ಮತ್ತು ಕಾರ್ಪೊರೇಟ್ ಚಟುವಟಿಕೆಗಳಲ್ಲಿ ಶೇ 25ರಷ್ಟು ಮಹಿಳೆಯರಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT