ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಕೆಲವು ಅಪರೂಪದ ವನ್ಯಜೀವಿಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸೆಪ್ಟೆಂಬರ್ 27ರಂದು ಕ್ವಾಲಾಲಂಪುರದಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ತಡೆದು ಶೋಧ ನಡೆಸಲಾಯಿತು. ಈ ವೇಳೆ ಹಸಿರು ಬಣ್ಣದ ಸಣ್ಣ ಆಮೆಗಳು ಮತ್ತು ಹಳದಿ ಆಮೆಗಳು ಪತ್ತೆಯಾಗಿವೆ’ ಎಂದು ಅವರು ತಿಳಿಸಿದ್ದಾರೆ.
ಮಲೇಷ್ಯಾದಿಂದ ಆಮೆಗಳನ್ನು ತಂದಿದ್ದ ಪ್ರಯಾಣಿಕ ಮತ್ತು ಅವುಗಳನ್ನು ಸ್ವೀಕರಿಸಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.