ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ | 5 ವರ್ಷದಲ್ಲಿ 41,000ಕ್ಕೂ ಅಧಿಕ ಮಹಿಳೆಯರು ನಾಪತ್ತೆ

ಗುಜರಾತ್‌ನಲ್ಲಿ ಕಳೆದ 5 ವರ್ಷದಲ್ಲಿ 40,000ಕ್ಕೂ ಅಧಿಕ ಮಹಿಳೆಯರು ಕಾಣೆಯಾಗಿದ್ದಾರೆ
Published 9 ಮೇ 2023, 5:44 IST
Last Updated 9 ಮೇ 2023, 5:44 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್‌ನಲ್ಲಿ ಕಳೆದ 5 ವರ್ಷದಲ್ಲಿ 40,000ಕ್ಕೂ ಅಧಿಕ ಮಹಿಳೆಯರು ಕಾಣೆಯಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ದತ್ತಾಂಶದಿಂದ ಗೊತ್ತಾಗಿದೆ.

ಇದನ್ನು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌‘ ಸುದ್ದಿ ಮಾಧ್ಯಮ ವರದಿ ಮಾಡಿದೆ.

ದತ್ತಾಂಶದ ಪ್ರಕಾರ 2016ರಲ್ಲಿ 7,105 ಮಹಿಳೆಯರು, 2017ರಲ್ಲಿ 7,712 , 2018 ರಲ್ ಲಿ9246 2019 ರಲ್ಲಿ 9,268 ಹಾಗೂ 2020ರಲ್ಲಿ 8,290 ಮಹಿಳೆಯರು ನಾಪತ್ತೆಯಾಗಿದ್ದಾರೆ.

ಅಂದರೆ 5 ವರ್ಷದಲ್ಲಿ 41,621 ಮಹಿಳೆಯರು ಕಾಣೆಯಾಗಿದ್ದಾರೆ.

2019 –20ರಲ್ಲಿ 4,722 ಮಹಿಳೆಯರು ಅಹಮದಾಬಾದ್‌ ಹಾಗೂ ವಡೋದರ ನಗರದಿಂದ ಕಾಣೆಯಾಗಿದ್ದಾರೆ ಎಂದು ಸರ್ಕಾರ ವಿಧಾನಸಭೆಯಲ್ಲೇ ತಿಳಿಸಿತ್ತು.

‘ನಾಪತ್ತೆಯಾದ ಮಹಿಳೆಯರು ಹಾಗೂ ಬಾಲಕಿಯರ ಪೈಕಿ ಕೆಲವರನ್ನು ವೇಶ್ಯಾವಾಟಿಕೆಗೆ ಗುಜರಾತ್‌ನ ಹೊರಗೆ ಕಳುಹಿಸಲಾಗಿದೆ‘ ಎಂದು ಗುಜರಾತ್‌ ರಾಜ್ಯದ ಮಾನವ ಹಕ್ಕು ಆಯೋಗದ ಸದಸ್ಯ ಸುಧೀರ್‌ ಸಿನ್ಹಾ ಹೇಳಿದ್ದಾರೆ.

‘ಪೊಲೀಸ್‌ ವ್ಯವಸ್ಥೆಯಲ್ಲಿ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ಇಂಥ ಪ್ರಕರಣಗಳು ಕೊಲೆಗಿಂತ ಗಂಭೀರವಾದುದು. ಯಾಕೆಂದರೆ ಒಂದು ಮಗು ಕಾಣೆಯಾದರೆ, ಆಕೆಯ ಆಗಮನಕ್ಕೆ ಪೋಷಕರು ವರ್ಷಪೂರ್ತಿ ಕಾಯುತ್ತಿರುತ್ತಾರೆ. ಕೊಲೆ ಪ್ರಕರಣಕ್ಕಿಂತ ಕಠಿಣವಾಗಿ ತನಿಖೆ ಮಾಡಬೇಕು‘ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT