ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 7 ಸಾವಿರಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದರು.

ಈ ಬಾರಿ ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರದ ದಡದಲ್ಲಿ ಯೋಗ ದಿನ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ಕಾರ್ಯಕ್ರಮವು ಶ್ರೀನಗರದ ಶೇರ್–ಇ–ಕಾಶ್ಮೀರ್ ಅಂತರರಾಷ್ಟ್ರೀಯ ಸಮ್ಮೇಳನ ಕೇಂದ್ರದಲ್ಲಿ ನಡೆಯಲಿದೆ

ಪಿಟಿಐ ಜೊತೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಯೋಗ ದಿನದಂದು ಕಾಶ್ಮೀರ ಕಣಿವೆಗೆ ಮೋದಿ ಅವರು ಆಗಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ‘ ಎಂದರು.

‘ಪ್ರಧಾನಿ ಮೋದಿ ಅವರು ಕಾಶ್ಮೀರದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದ್ದು, ಅದಕ್ಕಾಗಿಯೇ ಶ್ರೀನಗರದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಜೂನ್ 21ರಂದು ಸುಮಾರು 7 ಸಾವಿರ ಜನ ಮೋದಿ ಅವರೊಂದಿಗೆ ದಾಲ್ ಸರೋವರದ ದಡದಲ್ಲಿ ಯೋಗ ಮಾಡಲಿದ್ದಾರೆ’ ಎಂದು ಸಿನ್ಹಾ ಹೇಳಿದರು.

‘ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 23 ಲಕ್ಷ ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜನರಲ್ಲಿ ಯೋಗ ಮಾಡುವತ್ತ ಒಲವು ಹೆಚ್ಚಿರುವುದನ್ನು ನಾವು ನೋಡಬಹದು. ಒತ್ತಡ ಮುಕ್ತ ಜೀವನಕ್ಕಾಗಿ ಜನರು ಯೋಗದತ್ತ ಒಲವು ತೋರುತ್ತಿದ್ದಾರೆ’ ಎಂದು ಹೇಳಿದರು.

‘ಶಾಂತಿಯುತವಾಗಿ ಯೋಗ ದಿನಾಚರಣೆಯನ್ನು ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.