ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷ: ಮಹಾಕಾಳೇಶ್ವರ ದೇವಸ್ಥಾನಕ್ಕೆ 8 ಲಕ್ಷಕ್ಕೂ ಹೆಚ್ಚು ಭಕ್ತರ ಭೇಟಿ

Published 2 ಜನವರಿ 2024, 8:39 IST
Last Updated 2 ಜನವರಿ 2024, 8:39 IST
ಅಕ್ಷರ ಗಾತ್ರ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ನಗರದ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಹೊಸ ವರ್ಷದ ದಿನದಂದು ಎಂಟು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ದೇವಸ್ಥಾನ ತೆರೆದಾಗಿನಿಂದ ಮುಚ್ಚುವವರೆಗೆ 8.10 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಆಡಳಿತಾಧಿಕಾರಿ ಸಂದೀಪ್‌ ಸೋನಿ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 6 ಗಂಟೆಯಿಂದಲೇ ದೇವರ ದರ್ಶನಕ್ಕಾಗಿ ಉದ್ದನೆಯ ಸರತಿ ಸಾಲುಗಳು ಇದ್ದವು. ಮುಂಜಾನೆ ದೇವರಿಗೆ ನಡೆದ ಭಸ್ಮಾರತಿಯನ್ನು ಸುಮಾರು 45,000ಕ್ಕೂ ಹೆಚ್ಚು ಜನರು ವೀಕ್ಷಿಸಿದರು ಎಂದು ಮಾಹಿತಿ ನೀಡಿದ್ದಾರೆ.

ಮಹಾಕಾಳೇಶ್ವರ ದೇವಾಲಯವು ದೇಶದ ಹನ್ನೆರೆಡು ‘ಜ್ಯೋತಿರ್ಲಿಂಗ’ಗಳಲ್ಲಿ ಒಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT