ಸಂಭಾಲ್: ಮೊಹರಂ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು, ಉತ್ತರ ಪ್ರದೇಶದ ಸಂಭಾಲ್ ಜಿಲ್ಲಾಡಳಿತವು 900ಕ್ಕೂ ಹೆಚ್ಚು ಜನರ ಮೇಲೆ ನಿರ್ಬಂಧ ಹೇರಿದೆ.

‘ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಸಾಧ್ಯತೆ ಇರುವ 900ಕ್ಕೂ ಹೆಚ್ಚು ಜನರಿಗೆ ನಿರ್ಬಂಧ ವಿಧಿಸಲಾಗಿದೆ. ಇನ್ನೂ ಹಲವರ ಅಪರಾಧ ಹಿನ್ನಲೆ ಪರಿಶೀಲನೆ ನಡೆಯುತ್ತಿದ್ದು, ಈ ಸಂಖ್ಯೆ ಹೆಚ್ಚಬಹುದು. ನಿರ್ಬಂಧಕ್ಕೆ ಒಳಗಾಗಿರುವ ವ್ಯಕ್ತಿಗಳು ಕಾನೂನು ಉಲ್ಲಂಘಿಸಿದರೆ ಜಿಲ್ಲಾಡಳಿತವು ಅವರ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡು, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 163ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಿದೆ’ ಎಂದು ಸಂಭಾಲ್ ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ವ್ಯಕ್ತಿಗಳ ಅಪರಾಧ ಹಿನ್ನೆಲೆ ಆಧರಿಸಿ ಭದ್ರತಾ ಠೇವಣಿ ಮೊತ್ತವನ್ನು ₹1 ಲಕ್ಷ, ₹2 ಲಕ್ಷ, ₹3 ಲಕ್ಷ ಮತ್ತು ₹5 ಲಕ್ಷ ಎಂದು ನಿಗದಿಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.