ಭುವನೇಶ್ವರ: ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ 100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಅವರಲ್ಲಿ 5ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಂಗಳವಾರ (ಏ.14) ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ವಸತಿ ಶಾಲೆಯಲ್ಲಿ ಮೆನುವಿನಲ್ಲಿ ಉಲ್ಲೇಖಿಸದ ಆಹಾರವನ್ನು ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಭಾನುವಾರ ಆಲೂಗಡ್ಡೆ ಮತ್ತು ಮಾವಿನ ಚಟ್ನಿಯನ್ನು ಸೇವಿಸಿದ್ದಾರೆ. ಪರಿಣಾಮ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದರು. ಬಳಿಕ ವಿದ್ಯಾರ್ಥಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು ಎಂದು ಪೋಷಕರು ಹೇಳಿದ್ದಾರೆ.

ಆ ಕೂಡಲೇ ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಅದರಲ್ಲಿ 67 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬರಿಪಾದದ ಪಿಎಂಆರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 5ನೇ ತರಗತಿಯ ವಿದ್ಯಾರ್ಥಿನಿ ರೂಪಾಲಿ ಬೆಸ್ರಾಳನ್ನು ಸೋಮವಾರ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಆದರೆ ರೂಪಾಲಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ ಎಂದು ಮಯೂರ್ಭಂಜ್ ಜಿಲ್ಲಾಧಿಕಾರಿ ಹೇಮಕಾಂತ ಸೇ ತಿಳಿಸಿದ್ದಾರೆ.

ಸದ್ಯ 66 ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 41 ವಿದ್ಯಾರ್ಥಿಗಳು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಒಂದು ವೈದ್ಯಕೀಯ ತಂಡವನ್ನು ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಇನ್ನೊಂದು ತಂಡ ಶಾಲೆಯಲ್ಲಿ ಮೊಕ್ಕಾಂ ಹೂಡಿದೆ. ಇನ್ನೂ ಕೆಲವು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಮೃತರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೃತರ ಕುಟುಂಬಕ್ಕೆ ಪರಿಹಾರ ಮತ್ತು ಇದಕ್ಕೆ ಕಾರಣರಾದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ರಸಗೋವಿಂದ್ಪುರ-ಜಲೇಶ್ವರ ರಸ್ತೆ ತಡೆ ನಡೆಸಿದರು. ಆ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯ ಜಯಂತ್ ಕುಮಾರ್ ಪಾಣಿಗ್ರಾಹಿ ಅವರನ್ನು ಅಮಾನತುಗೊಳಿಸಲಾಗಿದ್ದು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರ ₹7 ಲಕ್ಷ ಪರಿಹಾರ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.