ನವದೆಹಲಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಮಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಅಖಿಲ ಭಾರತ ಮಜ್ಲೀಸ್ ಇ ಇತ್ತೇಹಾದುಲ್ ಮುಸ್ಲಿಮಿನ್(ಎಐಎಂಐಎಂ) ಪಕ್ಷದ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಸಿದ್ಧಾಂತದ ಬಗ್ಗೆ ಪ್ರಶ್ನೆ ಎತ್ತಿರುವ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಮೂಲದ ಅಭ್ಯರ್ಥಿಯೊಬ್ಬರ ಪರ ಸೋನಿಯಾ ಗಾಂಧಿ ಪ್ರಚಾರ ಮಾಡುತ್ತಾರೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ ಎಂದಿದ್ದಾರೆ.

'ಇದಾ ನಿಮ್ಮ ಜಾತ್ಯತೀತತೆ? ನೀವು ಮೋದಿಯವರ ವಿರುದ್ಧ ಹೋರಾಡುವುದು ಹೀಗೆಯೇ?’ಎಂದು ಓವೈಸಿ ಪ್ರಶ್ನಿಸಿದ್ದಾರೆ.

‘ಮೇಡಂ ಸೋನಿಯಾ ಗಾಂಧಿ, ಒಬ್ಬ ಆರ್ಎಸ್ಎಸ್ ವ್ಯಕ್ತಿ ಪರವಾಗಿ ನೀವು ಪ್ರಚಾರ ಮಾಡುವಿರಿ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಜಗದೀಶ್ ಶೆಟ್ಟರ್ ಆರ್ಎಸ್ಎಸ್ ಮೂಲದ ವ್ಯಕ್ತಿ’ ಎಂದು ಅವರು ಕಿಡಿಕಾರಿದ್ದಾರೆ.

‘ಇದೊಂದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಸೈದ್ದಾಂತಿಕ ಹೋರಾಟದಲ್ಲಿ ವಿಫಲವಾಗಿದೆ’ಎಂದು ಟೀಕಿಸಿದ್ದಾರೆ.

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಸ್ಪರ್ಧಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಶೆಟ್ಟರ್, ಈ ಬಾರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.

ಶನಿವಾರ ಹುಬ್ಬಳ್ಳಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆ ಶೆಟ್ಟರ್ ವೇದಿಕೆ ಹಂಚಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.