ಹೈದರಾಬಾದ್: ಕುಟುಂಬವೊಂದಕ್ಕೆ ಎರಡು ಮಕ್ಕಳನ್ನು ಮಿತಿಗೊಳಿಸುವ ಕಾನೂನು ತರಬೇಕು ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಯನ್ನು ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಓವೈಸಿ ಟೀಕಿಸಿದ್ದಾರೆ.

ನಿಜಾಮಾಬಾದ್ ಜಿಲ್ಲೆಯಲ್ಲಿಮಹಾನಗರ ಪಾಲಿಕೆ ಚುನಾವಣೆ ರ್‍ಯಾಲಿಯನ್ನು ಉದ್ದೇಶಿಸಿಮಾತನಾಡಿದ ಓವೈಸಿ,‘ಐದು ವರ್ಷದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ಎನ್‌ಡಿಎ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಇದೀಗ ಆರ್‌ಎಸ್‌ಎಸ್ ಜನರು ಎರಡು ಮಕ್ಕಳು ಮಿತಿಗೊಳಿಸುವ ಕಾನೂನಿನ ಬಗ್ಗೆ ಮಾತನಾಡುತ್ತಿದ್ದಾರೆ. ದೇಶದಲ್ಲಿ ಶೇ 60 ಜನಸಂಖ್ಯೆ 40 ವರ್ಷದೊಳಗಿನ ಯುವಜನರಾಗಿದ್ದು, ಇವರಿಗೆ ಉದ್ಯೋಗ ದೊರಕಿಸಿಕೊಡುವಲ್ಲಿ ಆರ್‌ಎಸ್‌ಎಸ್ ಹಾಗೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.

‘2018ರಲ್ಲಿ ಪ್ರತಿ ದಿನ 36 ನಿರುದ್ಯೋಗಿ ಯುವಜನರು ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಮಗೆ ನಾಚಿಕೆಯಾಗಬೇಕು’ ಎಂದು ಟೀಕಿಸಿದರು.

ಇದನ್ನೂ ಓದಿ...ಆರ್ಎಸ್ಎಸ್ಗೂ ರಾಜಕೀಯಕ್ಕೂ ಸಂಬಂಧ ಇಲ್ಲ:ಮೋಹನ್ ಭಾಗವತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.