ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಪಾಕಿಸ್ತಾನದಿಂದ ಪ್ರೇರಣೆ ಪಡೆಯುವುದೇಕೆ? -ಓವೈಸಿ

Published 27 ಜೂನ್ 2023, 14:17 IST
Last Updated 27 ಜೂನ್ 2023, 14:17 IST
ಅಕ್ಷರ ಗಾತ್ರ

ಹೈದರಾಬಾದ್: ತ್ರಿವಳಿ ತಲಾಖ್, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ಮಧ್ಯಪ್ರದೇಶದ ಪಸ್ಮಂದ ಮುಸ್ಲಿಮರ (ಮುಸ್ಲಿಂನಲ್ಲಿ ಹಿಂದುಳಿದವರು) ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್‌ ಒವೈಸಿ, ಪ್ರಧಾನಿ ಏಕೆ ಪಾಕಿಸ್ತಾನದಿಂದ ಪ್ರೇರಣೆ ಪಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆಯ ಕುರಿತು ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಓವೈಸಿ, ಯುಸಿಸಿ ಹೆಸರಲ್ಲಿ ದೇಶದ ವಿವಿಧತೆ ಮತ್ತು ವೈವಿಧ್ಯತೆಯನ್ನು ಕಿತ್ತುಕೊಳ್ಳಲಾಗುತ್ತಿದೆಯೇ ಎಂದು ವಾಗ್ದಾಳಿ ಮಾಡಿದ್ದಾರೆ.

ಎನ್‌ಡಿಎ ಸರ್ಕಾರ ತ್ರಿವಳಿ ತಲಾಖ್ ರದ್ದುಗೊಳಿಸಿದ್ದರೂ ತಳಮಟ್ಟದಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಎಂದು ಓವೈಸಿ ಹೇಳಿದರು.

ಪಾಕಿಸ್ತಾನವನ್ನು ಉಲ್ಲೇಖಿಸಿ ಪ್ರಧಾನಿ ಮೋದಿ, ಅಲ್ಲಿ ತ್ರಿವಳಿ ತಲಾಖ್ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ. ಮೋದಿ ಅವರು ಪಾಕಿಸ್ತಾನದ ಕಾನೂನಿನಿಂದ ಏಕೆ ಪ್ರೇರಣೆ ಪಡೆಯಬೇಕು? ತ್ರಿವಳಿ ತಲಾಖ್ ವಿರುದ್ಧ ಕಾನೂನು ಸಹ ರೂಪಿಸಿದರು. ಆದರೆ ತಳಮಟ್ಟದಲ್ಲಿ ಯಾವುದೇ ಪರಿಣಾಮ ಬೀರಿಲ್ಲ. ಬದಲಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT