ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿತಾಸಕ್ತಿ ಸಂಘರ್ಷ ಆರೋಪ: ಸೆಬಿ ಅಧ್ಯಕ್ಷೆ ಬುಚ್‌ಗೆ ಸಮನ್ಸ್‌ ಸಾಧ್ಯತೆ

ನಿಯಂತ್ರಕ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಪಿಎಸಿ ನಿರ್ಧಾರ
Published : 6 ಸೆಪ್ಟೆಂಬರ್ 2024, 12:45 IST
Last Updated : 6 ಸೆಪ್ಟೆಂಬರ್ 2024, 12:45 IST
ಫಾಲೋ ಮಾಡಿ
Comments

ನವದೆಹಲಿ: ಸಂಸತ್ತಿನ ಕಾಯ್ದೆಯಡಿ ಸ್ಥಾಪಿಸಲಾಗಿರುವ ವಿವಿಧ ನಿಯಂತ್ರಕ ಸಂಸ್ಥೆಗಳ ಕಾರ್ಯನಿರ್ವಹಣೆ ಕುರಿತು ಪರಾಮರ್ಶೆ ನಡೆಸಲು ಸಂಸತ್‌ನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ನಿರ್ಧರಿಸಿದೆ.

ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ವಿರುದ್ಧ ಹಿತಾಸಕ್ತಿ ಸಂಘರ್ಷ ಆರೋಪಗಳು ಕೇಳಿಬಂದಿರುವ ಸಂದರ್ಭದಲ್ಲಿಯೇ ಪಿಎಸಿ ಈ ನಿರ್ಧಾರ ಕೈಗೊಂಡಿದೆ.

ಈ ಕುರಿತು ಮಾಹಿತಿ ನೀಡಿದ ಪಿಎಸಿ ಅಧ್ಯಕ್ಷ ಕೆ.ಸಿ.ವೇಣುಗೋಪಾಲ್‌, ವಿವಿಧ ನಿಯಂತ್ರಕ ಸಂಸ್ಥೆಗಳ ಸಾಧನೆ ಕುರಿತು ಪರಾಮರ್ಶೆ ನಡೆಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಸಮಿತಿ ಸದಸ್ಯರು ಸಲಹೆಗಳನ್ನು ನೀಡಿದ್ದಾರೆ ಎಂದರು.

‘ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಅವರಿಗೆ ಸಮನ್ಸ್‌ ಜಾರಿ ಮಾಡುವ ಕುರಿತಂತೆ ಸಮಿತಿ ನಿರ್ಧರಿಸಲಿದೆ’ ಎಂದು ಪ್ರಶ್ನೆಯೊಂದಕ್ಕೆ ವೇಣುಗೋಪಾಲ್‌ ಉತ್ತರಿಸಿದ್ದಾರೆ.

ಬ್ಯಾಂಕಿಂಗ್‌ ಮತ್ತು ವಿಮೆ ಕ್ಷೇತ್ರದಲ್ಲಿ ಸುಧಾರಣೆಗಳು, ಕೇಂದ್ರ ಪುರಸ್ಕೃತ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ, ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ನೀತಿ ನಿರೂಪಣೆ, ಸಾರ್ವಜನಿಕ ಮೂಲಸೌಕರ್ಯಗಳು ಹಾಗೂ ಸೌಲಭ್ಯಗಳಿಗೆ ಶುಲ್ಕ ವಿಧಿಸುವ ಕುರಿತಂತೆಯೂ ಪರಾಮರ್ಶೆ ನಡೆಸಲು ಸಮಿತಿ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT