ರಾಂಚಿ: ಪಹಲ್ಗಾಮ್ ದಾಳಿಯಲ್ಲಿ ಗುಪ್ತಚರ ವೈಫಲ್ಯದ ಕುರಿತು ಪ್ರಧಾನಿ ಗುರಿಯಾಗಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡಿರುವ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ಭದ್ರತಾ ಸಂಸ್ಥೆಗಳ ನೈತಿಕ ಸ್ಥೈರ್ಯ ಕುಗ್ಗಿಸುವ ಯತ್ನ ಇದಾಗಿದೆ ಎಂದು ಹೇಳಿದೆ.

ಭಯೋತ್ಪಾದಕರ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದ ಪ್ರವಾಸವನ್ನು ಮೊಟಕುಗೊಳಿಸಿದ್ದರು. ಪಹಲ್ಗಾಮ್ ಭಯೋತ್ಪದಾಕ ದಾಳಿಗೂ ಮೂರು ದಿನಗಳ ಮೊದಲು ಪ್ರಧಾನಿಗೆ ಗುಪ್ತಚರ ಮಾಹಿತಿ ಬಂದಿತ್ತು ಎಂದು ಖರ್ಗೆ ಆರೋಪಿಸಿದ್ದರು.

ಈ ಕುರಿತು ಹೇಳಿಕೆ ನೀಡಿರುವ ಜಾರ್ಖಂಡ್ನ ಬಿಜೆಪಿ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ, ಪ್ರಧಾನಿ ಮೇಲಿನ ಖರ್ಗೆ ಅವರ ಆರೋಪವು ಭದ್ರತಾ ಸಂಸ್ಥೆಗಳ ನೈತಿಕ ಸ್ಥೈರ್ಯ ಕುಗ್ಗಿಸುವ ಉದ್ದೇಶವನ್ನು ಹೊಂದಿದೆ. ಭಯೋತ್ಪಾದನೆ ಹಾಗೂ ಪಾಕಿಸ್ತಾನ ವಿರುದ್ಧದ ಹೋರಾಟ ನಿರ್ಣಾಯಕ ಹಂತದಲ್ಲಿರುವಾಗ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಡೀ ದೇಶವೇ ಪ್ರಧಾನಿ ಜೊತೆ ಒಗ್ಗಟ್ಟು ಪ್ರದರ್ಶಿಸಿರುವ ಈ ಸಂದರ್ಭದಲ್ಲಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಕೊಳಕು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಖರ್ಗೆ ಹೇಳಿಕೆ ಅನಗತ್ಯವಾಗಿತ್ತು ಎಂದು ಅವರು ಹೇಳಿದ್ದಾರೆ.
.ಉಗ್ರರ ದಾಳಿ ಸಾಧ್ಯತೆ ಕುರಿತ ವರದಿ, ಪ್ರವಾಸ ರದ್ದುಪಡಿಸಿದ್ದ ಪ್ರಧಾನಿ: ಖರ್ಗೆ.Pahalgam Attack: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಪಾಕ್ಗೆ ಛೀಮಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.