ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಸಮೀಪ ಉಗ್ರರು ನಡೆಸಿದ ಭೀಕರ ದಾಳಿಯ ಕುರಿತು ಒಮ್ಮತದ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಇಂದು ಸರ್ವಪಕ್ಷಗಳ ಸಭೆ ಕರೆದಿದೆ ಎಂದು ಮೂಲಗಳು ತಿಳಿಸಿವೆ.

ಸಂಜೆ 6ಕ್ಕೆ ನಡೆಯುವ ಸಭೆ ಸಂದರ್ಭ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ಅಧಿಕಾರಿಗಳು, ಉಗ್ರರ ದಾಳಿ, ಅದಕ್ಕೆ ಸಂಬಂಧಿಸಿದಂತೆ ಸಂಗ್ರಹಿಸಲಾಗಿರುವ ಸಾಕ್ಷ್ಯಗಳು, ದುಷ್ಕೃತ್ಯದ ಬಳಿಕ ಪಾಕಿಸ್ತಾನದ ವಿರುದ್ಧ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಾಯಕರುಗಳಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಸೇರಿದಂತೆ ಕೆಲವು ವಿರೋಧ ಪಕ್ಷಗಳು ದಾಳಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದವು. ಹೀಗಾಗಿ, ಇಂದಿನ ಸಭೆ ವೇಳೆ ಕೇಂದ್ರ ಗುಪ್ತಚರ ವೈಫಲ್ಯದ ಪ್ರಶ್ನೆಗಳು ಎದುರಾಗುವ ಸಾಧ್ಯತೆ ಇದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗುಪ್ತಚರ ವೈಫಲ್ಯ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಅಂತಹ ಪ್ರಶ್ನೆಗಳನ್ನು ನಾಯಕರ ಸಭೆಯಲ್ಲಿ ಕೇಳಬಹುದು. ಸದ್ಯ, ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹಾಗೂ ಬಲವಾದ ಸಂದೇಶ ರವಾನಿಸುವುದು ಮುಖ್ಯ ಎಂದಿದ್ದರು.
.Pahalgam Terror attack: ಪಾಕ್ನೊಂದಿಗೆ ಸಂಬಂಧ ಕಡಿದುಕೊಂಡ ಭಾರತ.Pahalgam attack: ಮನೆ ತಲುಪಿದ ಮಂಜುನಾಥ ರಾವ್, ಭರತ್ ಭೂಷಣ್ ಪಾರ್ಥಿವ ಶರೀರಗಳು.
ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ. ದಾಳಿಯ ಬೆನ್ನಲ್ಲೇ, ಖಂಡನೆ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ವಾಸ್ತವ ಸ್ಥಿತಿ ಕುರಿತು ಪೊಳ್ಳು ಹೇಳಿಕೆಗಳನ್ನು ನೀಡುವ ಬದಲು, ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.