ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅಮರನಾಥ ಯಾತ್ರೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಹೇಳಿದ್ದಾರೆ.

‘ಅಮರನಾಥ ಯಾತ್ರೆ ಒಂದು ಧಾರ್ಮಿಕ ಕಾರ್ಯಕ್ರಮ. ಅಮರನಾಥ ಯಾತ್ರೆಗೆ ಬರಲು ಬಯಸುವವರು ಸ್ವಂತ ಇಚ್ಛೆಯಿಂದ ಬರುತ್ತಾರೆ. ಕೆಲವರು ಕೇದಾರನಾಥಕ್ಕೆ ಹೋಗುತ್ತಾರೆ. ಕೆಲವರು ಹಿಮ ಇರುವುದರಿಂದ ಹೋಗುವುದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದಾಗಿ ಯಾತ್ರೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯು ಒಂದು ದೊಡ್ಡ ಘಟನೆಯಾಗಿದ್ದರೂ, ಜಮ್ಮು ಮತ್ತು ಕಾಶ್ಮೀರದ ಶ್ರೀಮಂತ ಸಂಸ್ಕೃತಿ ಹಾಗೂ ಸಂಪ್ರದಾಯದ ಅಡಿಪಾಯವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಪಹಲ್ಗಾಮ್, ಅಮರನಾಥ ಯಾತ್ರೆಯ ಪ್ರಮುಖ ಮೂಲ ಶಿಬಿರಗಳಲ್ಲಿ ಒಂದಾಗಿದೆ.
.ಪಾಕ್ನ ಅರ್ಷದ್ ಆಹ್ವಾನಿಸಿದ್ದಕ್ಕೆ ನನ್ನ ವಿರುದ್ಧ ದ್ವೇಷ, ನಿಂದನೆ: ನೀರಜ್ ಬೇಸರ.Pahalgam Attak | ಭಯೋತ್ಪಾದಕ ದಾಳಿ ಖಂಡಿಸಿ ದೆಹಲಿಯಲ್ಲಿ ವ್ಯಾಪಾರಿಗಳ ಬಂದ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.