ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರ ಸಹಚರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪೋರಾದ ಪ್ರದೇಶವನ್ನು ಸುತ್ತುವರಿದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಅವಿತಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ತಕ್ಷಣವೇ ಭದ್ರತಾ ಪಡೆಗಳು ತಕ್ಕ ಪ್ರತ್ಯುತ್ತರವನ್ನು ನೀಡಿವೆ. ಈ ನಡುವೆ ಉಗ್ರರಿಗೆ ನೆರವಾಗುವ ಸಹಚರನನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದರು.
.Pahalgam Terror Attack: ಪಾಕ್ ಆರ್ಥಿಕತೆಗೆ ಭಾರಿ ಪೆಟ್ಟು?.Explainer: 1960ರ ಸಿಂಧೂ ಜಲ ಒಪ್ಪಂದ ಅಮಾನತು; ಪಾಕ್ ಮೇಲೆ ಪರಿಣಾಮ ಏನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.