ಜಮ್ಮು: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಮುಂದುವರಿದಿದ್ದು, ಶುಕ್ರವಾರ ಬೆಳಗಿನ ಜಾವ ಜಮ್ಮುವಿನಲ್ಲಿ ದೊಡ್ಡ ಸ್ಫೋಟದ ಸದ್ದು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಭಯಬೀತಗೊಂಡಿದ್ದಾರೆ.

ಬಳಿಕ, ಸಂಪೂರ್ಣ ಜಮ್ಮುವಿನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಬ್ಲಾಕ್ಔಟ್ ಮಾಡಲಾಗಿತ್ತು.

ಗುರುವಾರ ರಾತ್ರಿ ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿ ಬಹು ಡ್ರೋನ್ ದಾಳಿ ವೇಳೆಯೂ ಬ್ಲಾಕ್ಔಟ್ ಮಾಡಿ ಡ್ರೋನ್ಗಳನ್ನು ಹೊಡೆದುರುಳಿಸಲಾಗಿತ್ತು.

ಆಗಸದಲ್ಲಿ ಮದ್ದುಗುಂಡುಗಳ ಚಟುವಟಿಕೆ ಕಂಡುಬಂದಿದೆ. ಸೈರನ್ಗಳ ಸದ್ದಿನ ನಂತರ ಬೆಳಗಿನ ಜಾವ 3.50ರಿಂದ .4.45ರ ನಡುವೆ ಸ್ಫೋಟದ ಶಬ್ದಗಳು ಕೇಳಿಬಂದವು. ಭದ್ರತಾ ಪಡೆಗಳು ಆಕ್ ದಾಳಿಯನ್ನು ವಿಫಗೊಳಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನಿ ಪಡೆಗಳು ಪೂಂಛ್, ರಜೌರಿ ಮತ್ತು ಜಮ್ಮು ಜಿಲ್ಲೆಗಳಲ್ಲಿ ರಾತ್ರಿ ಇಡೀ ಗುಂಡು ಹಾರಿಸಿ ಮತ್ತು ಶೆಲ್ ದಾಳಿ ನಡೆಸಿದ್ದರಿಂದ ಹಲವು ಬಾರಿ ಕದನ ವಿರಾಮ ಉಲ್ಲಂಘನೆ ವರದಿಯಾಗಿವೆ. ಭಾರತೀಯ ಪಡೆಗಳು ಪ್ರತಿದಾಳಿ ನಡೆಸಿವೆ.

ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸೇನೆ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು ಸಂಯಮ ಕಾಯ್ದುಕೊಳ್ಳುವಂತೆ ಒತ್ತಾಯಿಸಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿನ ಎಲ್ಲ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ.
.ಸಾಂಬಾ ಗಡಿಯಲ್ಲಿ ಉಗ್ರರ ಪ್ರಮುಖ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF.ಆಳ–ಅಗಲ: ಪಾಕಿಸ್ತಾನಕ್ಕೆ ಭಾರತದೊಂದಿಗೆ ಯುದ್ಧ ಮಾಡುವ ಶಕ್ತಿ ಇದೆಯೇ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.