ಶ್ರೀನಗರ: ಪಹಲ್ಗಾಮ್ ದಾಳಿ ಬೆನ್ನಲ್ಲೇ ಉಗ್ರರ ಬೇಟೆಗೆ ಕಾರ್ಯಾಚರಣೆ ಆರಂಭಿಸಿರುವ ಭದ್ರತಾ ಪಡೆಗಳು, ಕಾಶ್ಮೀರದ ಕಣಿವೆಯಲ್ಲಿ ಮೂವರು ಶಂಕಿತ ಉಗ್ರರ ಮನೆಗಳನ್ನು ಶನಿವಾರ ನೆಲಸಮಗೊಳಿಸಿವೆ.

ಶುಕ್ರವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಪುಲ್ವಾಮಾ ಜಿಲ್ಲೆಯ ಮುರಾನ್ ಪ್ರದೇಶದಲ್ಲಿರುವ ಶಂಕಿತ ಉಗ್ರ ಅಹ್ಸಾನ್ ಉಲ್ ಹಕ್ ಶೇಖ್ಗೆ ಸೇರಿದ ಮನೆಯನ್ನು ಕೆಡವಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2018ರಲ್ಲಿ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಈತ ಇತ್ತೀಚೆಗೆ ಕಾಶ್ಮೀರದ ಕಣಿವೆಯೊಳಗೆ ನುಸುಳಿದ್ದನು ಎಂದು ಮಾಹಿತಿ ನೀಡಿದ್ದಾರೆ.

ಶೋಪಿಯಾನ್ ಜಿಲ್ಲೆಯ ಚೋಟಿಪೋರಾದಲ್ಲಿ ನಡೆದ ಇದೇ ರೀತಿಯ ಕಾರ್ಯಾಚರಣೆಯಲ್ಲಿ, ಲಷ್ಕರ್-ಎ-ತಯಬಾ(ಎಲ್ಇಟಿ) ಸಂಘಟನೆಯ ಸಕ್ರಿಯ ಉನ್ನತ ಕಮಾಂಡರ್ ಶಾಹಿದ್ ಅಹ್ಮದ್ ಕುಟ್ಟಾಯ ಮನೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸಕ್ರಿಯನಾಗಿರುವ ಕುಟ್ಟಾಯ ಅನೇಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಕುಲ್ಗಮ್ ಜಿಲ್ಲೆಯ ಮಾತಲ್ಹಾಮಾ ಪ್ರದೇಶದಲ್ಲಿ 2023ರಿಂದ ಸಕ್ರಿಯನಾಗಿರುವ ಮತ್ತು ಹಲವಾರು ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭದ್ರತಾ ಪಡೆಗಳ ಕಣ್ಗಾವಲಿನಲ್ಲಿದ್ದ ಜಾಕಿರ್ ಅಹ್ಮದ್ ಗನಿಗೆ ಸೇರಿದ ನಿವಾಸವನ್ನೂ ಶುಕ್ರವಾರ ರಾತ್ರಿ ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಗುರುವಾರ ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಲಷ್ಕರ್–ಎ–ತಯಬಾ ಸಂಘಟನೆಯ ಇಬ್ಬರು ಭಯೋತ್ಪಾದಕರ ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಮನೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿರುವ ವೇಳೆ ಸ್ಫೋಟಕಗಳು ಪತ್ತೆಯಾಗಿದ್ದು, ಅವು ಸ್ಫೋಟಗೊಂಡು ಮನೆಗಳು ಧ್ವಂಸವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.