ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಕಣಿವೆ ರಾಜ್ಯದಲ್ಲಿ 48 ಪ್ರವಾಸಿ ತಾಣಗಳನ್ನು ಮಚ್ಚಲಾಗಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ.

ಭದ್ರತಾ ಭೀತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಹಿತದೃಷ್ಟಿಯಿಂದ ಕಾಶ್ಮೀರದಲ್ಲಿರುವ 87 ಸಾರ್ವಜನಿಕ ಉದ್ಯಾನವನಗಳ ಪೈಕಿ 48 ಅನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ಹೊಸದಾಗಿ ತೆರೆಯಲಾದ ತಾಣಗಳು ಇದರಲ್ಲಿ ಸೇರಿವೆ ಎಂದು ಅವರು ತಿಳಿಸಿದ್ದಾರೆ.

ಭದ್ರತಾ ಪರಿಶೀಲಿನೆ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಈ ಪಟ್ಟಿಗೆ ಮತ್ತಷ್ಟು ಪ್ರದೇಶಗಳು ಒಳಪಡುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾದ ಪ್ರದೇಶಗಳಲ್ಲಿ ಧೂದ್ಪಥರಿ, ಕೊಕರ್ನಾಗ್, ದಕ್ಸುಮ್, ಸಿಂಥನ್ ಟಾಪ್, ಅಛಬಲ್, ಬಂಗಸ್ ವ್ಯಾಲಿ, ಮಾರ್ಗನ್ ಟಾಪ್ ಮತ್ತು ತೋಸಾಮೈದಾನ್ ಸೇರಿವೆ. ಈ ಕುರಿತು ಅಧಿಕೃತ ಆದೇಶ ಹೊರಡಿಸದಿದ್ದರೂ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ದಕ್ಷಿಣ ಕಾಶ್ಮೀರದಲ್ಲಿರುವ ಹಲವಾರು ಮೊಘಲ್ ಉದ್ಯಾನಗಳ ಬಾಗಿಲುಗಳನ್ನು ಮುಚ್ಚಲಾಗಿದೆ.
.ಗಡಿಯಲ್ಲಿ ಸತತ 5ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.ವಿಶ್ವಸಂಸ್ಥೆ: ಭಯೋತ್ಪಾದನೆಗೆ ಹಾಲೆರೆಯುವ ಪುಂಡ ದೇಶ: ಪಾಕ್ ವಿರುದ್ಧ ಭಾರತ ಕಿಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.