ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕುರಿತ ಚರ್ಚೆಗೆ ವಿಳಂಬ ಮತ್ತು ಬಿಹಾರದಲ್ಲಿ ನಡೆಸಲಾದ ವಿಶೇಷ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ವಿರೋಧಿಸಿ ಪ್ರತಿಪಕ್ಷಗಳು ಸಧನದ ಬಾವಿಗಿಳಿದು ಪ್ರತಿಭಟಿಸಿದ ಕಾರಣ ಲೋಕಸಭಾ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಗಿದೆ.

ಮಧ್ಯಾಹ್ನದ ನಂತರ ಆಪರೇಷನ್ ಸಿಂಧೂರ ಕುರಿತ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ.

‘ಎಲ್ಲರಿಗೂ ಬದ್ಧತೆ ಎಂಬುದು ಒಂದು ಇರುತ್ತದೆ. ಸರ್ವಪಕ್ಷಗಳ ಒತ್ತಾಯದ ಮೇರೆಗೆ ಆಪರೇಷನ್ ಸಿಂಧೂರ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅದನ್ನು ಬಿಟ್ಟು ಸದನದ ಬಾವಿಗೆ ಇಳಿದಿದ್ದೀರಿ’ ಎಂದು ಸ್ಪೀಕರ್ ಓಂ ಬಿರ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಆಪರೇಷನ್ ಸಿಂಧೂರ ಕುರಿತು ಚರ್ಚೆ ನಡೆಸಬೇಕೆಂದರೆ, ನೀವೆಲ್ಲರೂ ನಿಮ್ಮ ಆಸನಗಳಿಗೆ ಮರಳಬೇಕು. ಸದನದ ಬಾವಿಗಿಳಿದು ಬೇರೆ ಯಾವುದೋ ವಿಷಯ ಕುರಿತು ಚರ್ಚೆ ನಡೆಸಲು ಒತ್ತಾಯಿಸಲು ಬಾರದು. ಸದನವು ನಿಯಮಗಳಿಗೆ ಅನುಗುಣವಾಗಿ ನಡೆಯುತ್ತದೆ’ ಎಂದಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ರಾಜನಾಥ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಇದ್ದರು. ಪಹಲ್ಗಾಮ್ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಭಯೋತ್ಪಾದಕರು ಮತ್ತು ಅವರ ನೆಲೆಗಳನ್ನು ಗುರಿಯಾಗಿಸಿ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಶೌರ್ಯ ಹಾಗೂ ಪರಾಕ್ರಮಗಳ ಕುರಿತು ವಿಶೇಷ ಚರ್ಚೆಗೆ ರಾಜನಾಥ ಸಿಂಗ್ ಸಮಯ ನಿಗದಿ ಮಾಡಿದ್ದರು.

ಆದರೆ ವಿರೋಧ ಪಕ್ಷಗಳು ತಮ್ಮ ಪಟ್ಟು ಬಿಡದ ಕಾರಣ, ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನದವರೆಗೂ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.