ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ನಂತರ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಭದ್ರತಾ ಪಡೆ ಮತ್ತೆ ಮೂವರು ಉಗ್ರರ ಮನೆಗಳನ್ನು ಧ್ವಂಸಗೊಳಿಸಿದೆ ಎಂದು ಅಧಿಕಾರಿಗಳು ಇಂದು (ಭಾನುವಾರ) ತಿಳಿಸಿದ್ದಾರೆ.

ಇದರೊಂದಿಗೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ, ಈವರೆಗೆ ಒಟ್ಟು ಒಂಬತ್ತು ಮನೆಗಳನ್ನು ನೆಲಸಮಗೊಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ವರ್ಷ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಅದ್ನಾನ್ ಶಫಿಯ ಮನೆಯನ್ನು ನೆಲಸಮಗೊಳಿಸಲಾಗಿದೆ.

ಪುಲ್ವಾಮಾದಲ್ಲಿ ಸಕ್ರಿಯ ಉಗ್ರ ಅಮೀರ್ ನಜೀರ್ ಮತ್ತು ಬಂಡಿಪೋರಾದಲ್ಲಿ ಲಷ್ಕರ್–ಎ–ತಯಬಾದ (ಎಲ್ಇಟಿ) ಉಗ್ರ ಜಮೀಲ್ ಅಹ್ಮದ್ ಶೇರ್ಗೊಜ್ರಿ ಮನೆಗಳನ್ನು ಧ್ವಂಸಗೊಳಿಸಲಾಗಿದೆ.
.Pahalgam Terror Attack: ಮತ್ತೆ ಮೂವರು ಶಂಕಿತ ಉಗ್ರರ ಮನೆಗಳು ಧ್ವಂಸ.Pahalgam Terror Attack: ರಾಜ್ಯದಲ್ಲಿ ಪಾಕ್ ಪ್ರಜೆಗಳ ಪತ್ತೆ ಕಾರ್ಯ ಚುರುಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.