ನವದೆಹಲಿ: ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ದಾಳಿಯಲ್ಲಿ ಭಾಗಿಯಾದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದರಿಂದಾಗಿ ಈ ಭೇಟಿಯೂ ಹೆಚ್ಚಿನ ಮಹತ್ವ ಪಡೆದಿದೆ.

ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾನುವಾರ ಭೇಟಿ ಮಾಡಿ, ಚರ್ಚೆ ನಡೆಸಿದ್ದರು.

ಇದಕ್ಕೂ ಮೊದಲು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು.

ಪಹಲ್ಗಾಮ್ನ ಭಯೋತ್ಪಾದಕರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಉಗ್ರರ ದಮನಕ್ಕೆ ದಾಳಿಯ ಮಾದರಿ, ಗುರಿ ಹಾಗೂ ಸಮಯ ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯವನ್ನು ಸೇನೆಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ನೀಡಿದ್ದರು.

ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು. ಇದಲ್ಲದೆ ಪಾಕ್ ವಿರುದ್ಧ ಹಲವು ಕಠಿಣ ರಾಜತಾಂತ್ರಿಕ ಕ್ರಮವನ್ನು ಕೈಗೊಂಡಿತ್ತು.
.ದೇಶೀಯ ವ್ಯವಸ್ಥೆಗೆ ಆದ್ಯತೆ: ಏರ್ಚೀಫ್ ಮಾರ್ಷಲ್ ಎ.ಪಿ ಸಿಂಗ್.Pahalgam Attack | ಮೃತಪಟ್ಟ ಯೋಧನ ಪತ್ನಿಯ ವಿರುದ್ಧ ಟ್ರೋಲ್; ಕಿಡಿಕಾರಿದ NCW.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.