ಶ್ರೀನಗರ: ದಕ್ಷಿಣ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು (ಬುಧವಾರ) ಬಿಡುಗಡೆಗೊಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.

ಈ ಕೃತ್ಯದಲ್ಲಿ ಭಾಗಿಯಾಗಿರುವ ಪಾಕಿಸ್ತಾನ ಮೂಲದ ಮೂವರನ್ನು ಆಸೀಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬದುಕುಳಿದವರ ಸಹಾಯದಿಂದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಈ ಮೂವರು ಮೂಸಾ, ಯೂನಸ್ ಹಾಗೂ ಆಸೀಫ್ ಎಂಬ ಹೆಸರುಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ.

ಪೂಂಚ್ನಲ್ಲಿ ಭಯೋತ್ಪಾದಕ ಸಂಬಂಧ ಕೃತ್ಯಗಳಲ್ಲಿ ಶಂಕಿತ ಉಗ್ರರು ಭಾಗಿಯಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್–ಎ–ತಯಬಾ ಬೆಂಬಲಿತ ಉಗ್ರ ಸಂಘಟನೆಯಾದ ರೆಸಿಸ್ಟನ್ಸ್ ಫ್ರಂಟ್ (ಟಿಆರ್ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ.
.Terror Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: 28 ಮಂದಿ ಸಾವು.Terror Attack: ಬಳ್ಳಾರಿ ವಿವಿ ಸಿಂಡಿಕೇಟ್ ಸಮಿತಿ ಮಾಜಿ ಸದಸ್ಯರ ಕುಟುಂಬ ಪಾರು.Terror Attack: ಮೃತರ ಸಂಖ್ಯೆ 26ಕ್ಕೆ ಏರಿಕೆ, ಪುಲ್ವಾಮ ಬಳಿಕದ ಭೀಕರ ದಾಳಿ.Terror Attack: ದಾಳಿ ನೆನೆದರೆ ಎದೆ ನಲುಗುತ್ತದೆ: ಸಿಎಂ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.