ನವದೆಹಲಿ: ಪಹಲ್ಗಾಮ್ ದಾಳಿಗೆ ಕಾರಣರಾದ ಭಯೋತ್ಪಾದಕರನ್ನು ಗುರುತಿಸಲಾಗಿದ್ದು, ಅವರು ಹೆಚ್ಚು ದಿನ ಬದುಕುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ತಿಳಿಸಿದರು.

‘ಜಮ್ಮು ಮತ್ತು ಕಾಶ್ಮೀರ: ಶಾಂತಿಯ ಕಡೆಗೆ’ ಕುರಿತು ಉಪನ್ಯಾಸ ನೀಡಿದ ಅವರು, ಕಾಶ್ಮೀರ ಕಣಿವೆಯಲ್ಲಿ ಶಾಂತಿಯನ್ನು ಭಂಗಗೊಳಿಸುವ ಯಾವುದೇ ಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.

‘ಒಳ್ಳೆಯ ಸುದ್ದಿ ಬರಲಿದೆ. ಆದರೆ ಅದನ್ನು ಈಗಲೇ ಬಹಿರಂಗಪಡಿಸುವುದು ಸೂಕ್ತವಲ್ಲ. ಐದು ವರ್ಷಗಳಲ್ಲಿ ಹಲವು ಭಯೋತ್ಪಾದಕ ಸಂಘಟನೆಗಳ ಭಯೋತ್ಪಾದಕರು ಹತರಾಗಿದ್ದಾರೆ. ಅವರಿಗಾದ ಗತಿಯೇ ಇವರಿಗೂ ಆಗುತ್ತದೆ ಎಂದು ವಿಶ್ವಾಸದಿಂದ ಹೇಳಬಲ್ಲೆ’ ಎಂದರು.

ಏಪ್ರಿಲ್ 22ರಂದು ಕಾಶ್ಮೀರ ಕಣಿವೆಯ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಅದಕ್ಕೆ ಪ್ರತೀಕಾರವಾಗಿ ಭಾರತವು ಮೇ 7ರಂದು ‘ಆಪರೇಷನ್ ಸಿಂಧೂರ’ ಮೂಲಕ ಪಾಕಿಸ್ತಾನಕ್ಕೆ ಬಲವಾದ ಪ್ರತಿಕ್ರಿಯೆ ನೀಡಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.