ಜಮ್ಮು: ಪಹಲ್ಗಾಮ್ ಭಯೋತ್ಪಾದಕ ದಾಳಿ ಸಂದರ್ಭದಲ್ಲಿ ಪ್ರವಾಸಿಗರನ್ನು ಉಳಿಸಲು ಹೋಗಿ ತಮ್ಮ ಜೀವವನ್ನೇ ಕಳೆದುಕೊಂಡ ಆದಿಲ್ ಹುಸ್ಸೇನ್ ಶಾ ಸೇರಿದಂತೆ 56 ಜನರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಪ್ರಶಸ್ತಿ ಘೋಷಿಸಿದೆ.

ವಿವಿಧ ಹಿನ್ನೆಲೆಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ನೀಡಿದವರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್ಗಾಮ್ ನಿವಾಸಿ ಹುಸ್ಸೇನ್ ಶಾ ಅವರು ಕಳೆದ ವರ್ಷ ಏಪ್ರಿಲ್ 22ರಂದು ಪಾಕಿಸ್ತಾನಿ ಭಯೋತ್ಪಾದಕರ ವಿರುದ್ಧ ಸೆಟೆದುನಿಂತು ಹಲವು ಪ್ರವಾಸಿಗರನ್ನು ರಕ್ಷಿಸಿದ್ದರು. ಅವರ ಶೌರ್ಯ ಮತ್ತು ಸಾಹಸವನ್ನು ಪರಿಗಣಿಸಿ ಮರಣೋತ್ತರವಾಗಿ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಪ್ರಶಸ್ತಿಯು ₹1 ಲಕ್ಷ ನಗದು ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.